ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿಯನ್ನು ಪಾಲ್ಗೊಳ್ಳದಂತೆ ನಿಷೇಧ ಹೇರಬೇಕು ಎಂದು ಆಂಧ್ರಪ್ರದೇಶ ಬಿಜೆಪಿ ಅಧ್ಯಕ್ಷ ಕನ್ನಾ ಲಕ್ಷ್ಮೀ ನಾರಾಯಣ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಗುಂಟೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ದೇಶದಲ್ಲಿ ಸಿಎಎ ವಿರೋಧಿಸಿ ನಡೆಯುವ ಸಮಾವೇಶ ಹಾಗೂ ಪ್ರತಿಭಟನೆಗಳಲ್ಲಿ ಓವೈಸಿ ಅವರು ಪಾಲ್ಗೊಂಡು ಸಿಎಎ ಬಗ್ಗೆ ತಪ್ಪು ಕಲ್ಪನೆಯನ್ನು ಜನರಲ್ಲಿ ಮೂಡಿಸುತ್ತಿದ್ದಾರೆ. ಸಂಸತ್‌ನಲ್ಲಿ ಅಂಗೀಕಾರವಾದ ಮಸೂದೆಯನ್ನು ವಿರೋಧಿಸೊ ಮೂಲಕ ಓವೈಸಿ ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ ಎಂದು ಕೆಂಡಕಾರಿದ್ದಾರೆ.
ಸಿಎಎ ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರೋಧಿ ಸಮಾವೇಶದಲ್ಲಿ ಪಾಲ್ಗೊಂಡು ಯುವಕರನ್ನು ತಪ್ಪುದಾರಿಗೆ ತಳ್ಳುತ್ತಿರುವ ಓವೈಸಿ ಅವರನ್ನು ಸಿಎಎ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳದಂತೆ ಕೇಂದ್ರ ಸರ್ಕಾರ ಈ ಕೂಡಲೇ ನಿಷೇಧ ಏರಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ನಾವೇ ಹೋರಾಟ ಮಾಡುತ್ತೇವೆ ಎಂದು ಕನ್ನಾ ಎಚ್ಚರಿಕೆ ನೀಡಿದರು.
ನನ್ನ ಇಲಾಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡುತ್ತಿಲ್ಲ; ಪರಮೇಶ್ವರ್
ಬೆಂಗಳೂರು: ಗೃಹ ಇಲಾಖೆಯಲ್ಲಿ ನನ್ನ ಬಿಟ್ಟು ಯಾರ ಹಸ್ತಕ್ಷೇಪವೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G. Parameshwara) ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ....