ನಾಯಿ ಬೊಗಳುತ್ತದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಅದರ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಮಧ್ಯಪ್ರದೇಶದ ಮುಸಖೇಡಿ ಎಂಬಲ್ಲಿ ನಡೆದಿದೆ. ಆರೋಪಿ ತನ್ನ ಅಂಗಡಿ ಮುಚ್ಚಿ ಮರಳಿ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿತ್ತು ಹಾಗೂ ಆ ವ್ಯಕ್ತಿಗೆ ರಸ್ತೆಯ ಮೂಲಕ ಹೋಗಲು ಸಾಧ್ಯವಾಗಲಿಲ್ಲ ಎಂದು ಆಜಾದ್ನಗರ ಪೊಲೀಸ್ ಠಾಣೆ ಪ್ರಭಾರಿ ನೀರಜ್ ಮೇಧಾ ಹೇಳಿದ್ದಾರೆ.
ಹೀಗಾಗಿ ಈತ ಕೋಪದ ಬರದಲ್ಲಿ ಮಾಲೀಕರಾಗಿರುವ 65 ವರ್ಷದ ಮಹಿಳೆಯ ಹೊಟ್ಟೆಗೆ ಒದ್ದಿದ್ದಾರೆ. ಆಗ ಅವರು ಕುಸಿದು ಬಿದ್ದಿದ್ದಾರೆ. ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸದ್ಯ ಆರೋಪಿ ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.