ದಾವಣಗೆರೆ: ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರದ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಜಿಲ್ಲೆಯಲ್ಲಿನ ‘ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್’ ಮಾಲೀಕ ನೇಣಿಗೆ ಶರಣಾಗಿದ್ದಾರೆ. ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್‌ಜಿ.ಎನ್ (34) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದ ಶರತ್, ಇತ್ತೀಚಿಗೆ ರಾಜಕೀಯದಲ್ಲಿ ಹೆಚ್ಚಿನ ಒಲವು ತೋರಿದ್ದರು. ಹೀಗಾಗಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದರು. ಅವರು ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕೇಂದ್ರಗಳನ್ನು ನಡೆಸುತ್ತಿದ್ದರು. ಆದರೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದಾವಣಗೆರೆ (Davanagere) ನಗರದ ವಿದ್ಯಾನಗರ (Vidhyanagara) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.






