ಆರೋಗ್ಯ ಸಚಿವರ ತವರಲ್ಲಿ ಆಕ್ಸಿಜನ್ ಸಿಲಿಂಡರ್ ಗಳ ಕಳ್ಳತನ
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಆಕ್ಸಿಜನ್ ಗೂ ಸಹ ಬೇಡಿಕೆ ಹೆಚ್ಚಾಗುತ್ತಿದೆ. ಆಕ್ಸಿಜನ್ ಇಲ್ಲದೇ ಎಷ್ಟೋ ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈ ಮಧ್ಯೆ ಸರ್ಕಾರಿ ಆಸ್ಪತ್ರೆಯಲ್ಲಿನ 10 ಆಕ್ಸಿಜನ್ ಸಿಲಿಂಡರ್ ಗಳನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಜಿಲ್ಲಾ ಕೋವಿಡ್ 19 ಆಸ್ಪತ್ರೆಯಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಗಳು ರಾತ್ರೋರಾತ್ರಿ ಕಳ್ಳತನವಾಗಿದೆ. ಈ ಸಂಬಂಧ ವೈದ್ಯರು ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆಸ್ಪತ್ರೆಯ ಮೂವರು ಶಂಕಿತ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಿದ್ದಾರೆ.