ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತ belagavi
ಬೆಳಗಾವಿ : ಬಳ್ಳಾರಿಯಿಂದ ನಗರಕ್ಕೆ ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತವಾಗಿದೆ.
ಬೆಳಗವಿ ತಾಲೂಕಿನ ಮುತ್ನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಓವರ್ ಟೇಕ್ ಮಾಡುವ ವೇಳೆ ಮುಂಬದಿಯ ಲಾರಿಗೆ ಆಕ್ಸಿಜನ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಅಪಘಾತ ವೇಳೆ ಆಕ್ಸಿಜನ್ ಲಿಕ್ವಿಡ್ ಗೆ ಹಾನಿ ಇಲ್ಲ.
ಇನ್ನು ಡಿಕ್ಕಿ ರಭಸಕ್ಕೆ ಟ್ಯಾಂಕರ್ ಟೈರ್ ಬ್ಲಾಸ್ಟ್ ಆಗಿ, ಎಕ್ಸಲ್ ಕಟ್ ಆಗಿದ್ದು, ಬೇರೆ ಆಕ್ಸಿಜನ್ ಟ್ಯಾಂಕರ್ ಕರೆತರಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
16 ಕೆಎಲ್ ಸಾಮಥ್ರ್ಯದ ಆಕ್ಸಿಜನ್ ಲಿಕ್ವಿಡ್ ಪೂರೈಸುತ್ತಿದ್ದ ಟ್ಯಾಂಕರ್ ಇದಾಗಿದೆ.