ಅಭಿನಯ ಬ್ರಹ್ಮನಿಗೆ ಪದ್ಮ | #AnanthnagforPadma ಎಂದು ಅಭಿಯಾನ
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಶುರುವಾಗಿದೆ.
2022ರ ಸಾಲಿನಲ್ಲಿ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳಿಗೆ ಜನರೇ ತಮ್ಮ ನಡುವಿನ ಸಾಧಕರನ್ನು, ಪ್ರತಿಭಾವಂತರ ಹೆಸರನ್ನು ಶಿಫಾರಸು ಮಾಡಬಹುದು ಪ್ರಧಾನ ಮಂತ್ರಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆ ಸೋಶಿಯಲ್ ಮಿಡಿಯಾದಲ್ಲಿ #PeoplesPadma ಹ್ಯಾಶ್ ಟ್ಯಾಗ್ ನಲ್ಲಿ ಅಭಿಯಾನವೊಂದು ಆರಂಭವಾಗಿದೆ.
ಇದಕ್ಕೆ ಕನ್ನಡ ಖ್ಯಾತ ನಟ ಅನಂತ್ ನಾಗ್ ಅವರಿಗೆ ಈ ವರ್ಷದ ಪದ್ಮ ಪ್ರಶಸ್ತಿಯನ್ನು ನೀಡಬೇಕೆಂದು #AnanthnagforPadma ಎಂಬ ಹ್ಯಾಶ್ ಟ್ಯಾಗ್ ನಡಿ ಅಭಿಯಾನ ಪ್ರಾರಂಭವಾಗಿದೆ.
ಇನ್ನು ಅಭಿನಯ ಬ್ರಹ್ಮ ಎಂದೇ ಖ್ಯಾತಿ ಪಡೆದಿರುವ ಅನಂತ್ ನಾಗ್ ಅವರು, ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇದನ್ನು ಪರಿಗಣಿಸಿ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕೇಳೋಣ. ನಮ್ಮ ನಾಡಿನ ಪರವಾಗಿ ಅನಂತ್ ನಾಗ್ ಅವರನ್ನು #AnanthnagforPadma ಪ್ರಶಸ್ತಿಗೆ ಹೆಸರನ್ನು ಸೂಚಿಸಿ ಎಂದು ನಟ, ನಿರ್ದೇಶಕ ರಿಷಭ್ ಶೆಟ್ಟಿ ಮನವಿ ಮಾಡಿದ್ದಾರೆ.
ಅನಂತ್ ನಾಗ್ ಅವರು ಕನ್ನಡ, ಹಿಂದಿ, ಮರಾಠಿ, ತಮಿಳು, ಮಲೆಯಾಳಂ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪಾತ್ರಗಳನ್ನು ಮಾಡಿದ್ದಾರೆ.