Padma Awards 2022 | ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
2022 ನೇ ಸಾಲಿನ ದೇಶದ ಸರ್ವೋಚ್ಛ ನಾಗರಿಕ ಪ್ರಶಸ್ತಿ
ಈ ಬಾರಿ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
ಟೋಕಿಯೋ ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಪದ್ಮ
ದೇವೇಂದ್ರ ಝಾಝರಿಯಾ ಅವರಿಗೆ ಪದ್ಮಭೂಷಣ ಪ್ರಶಸ್ತಿ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 2022 ನೇ ಸಾಲಿನ ದೇಶದ ಸರ್ವೋಚ್ಛ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಮೊದಲ ಹಂತದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ 2 ಪದ್ಮವಿಭೂಷಣ, 8 ಪದ್ಮಭೂಷಣ ಮತ್ತು 54 ಪದ್ಮಶ್ರಿ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ಸಾಧಕರಿಗೆ ಪ್ರದಾನ ಮಾಡಲಾಯಿತು.
ಈ ಬಾರಿ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಸಾಲಿನಲ್ಲಿ ಒಟ್ಟು 9 ಕ್ರೀಡಾ ಸಾಧಕರು ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಪೈಕಿ ನಾಲ್ವರು ಟೋಕಿಯೋ ಪ್ಯಾರಾಲಿಂಪಿಕ್ಸ್ ಪದಕ ವಿಜೇತರೂ ಸೇರಿದ್ದಾರೆ. ಇವುಗಳ ಪೈಕಿ ದೇಶದ ಮೂರನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಗೆ ದೇವೇಂದ್ರ ಝಾಝರಿಯಾ ಪಾತ್ರರಾಗಿದ್ದಾರೆ. ಇನ್ನುಳಿದಂತೆ ಅವನಿ ಲೇಖರಾ, ಸಮಿತ್ ಆಂಟಿಲ್ ಹಾಗೂ ಪ್ರಮೋದ್ ಭಗತ್ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. Padma Awards 2022 in Sports Category