ಶ್ರೀ ನಗರ, ಮೇ 22: ಕೊರೋನಾ ವೈರಸ್ ದೇಶಗಳನ್ನೇ ಕಂಗೆಡಿಸಿರುವ ಈ ಸಂಕಷ್ಟದ ಸಮಯದಲ್ಲೂ ಪಾಕ್ ಬೆಂಬಲಿತ ಭಯೋತ್ಪಾದಕರು ಗಡಿಯಲ್ಲಿ ಹೊಂಚು ಹಾಕಿ ಭಾರತದ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ. ತನ್ನ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದೆ ಜನ ಸೋಂಕಿನಿಂದ ಸಾವನ್ನಪ್ಪುತ್ತಿದ್ದರೂ ಕ್ಯಾರೆ ಅನ್ನದ ಪಾಕ್ ಗೆ ಈ ಸಂಕಷ್ಟದ ಸಮಯದಲ್ಲೂ ಭಾರತದ ಮೇಲಿನ ದಾಳಿಯದೇ ಚಿಂತೆ.
ಪಾಕ್ ನ ಈ ಕುತಂತ್ರ ಬುದ್ದಿಗೆ ಪಾಠ ಕಲಿಸಲು ಎಂಬಂತೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾಗದಲ್ಲಿರುವ ಪಾಕ್ ಪ್ರೇರಿತ ಭಯೋತ್ಪಾದನೆ ಶಿಬಿರಗಳಲ್ಲಿ ಕೊರೊನಾ ವೈರಸ್ ಹಾವಳಿ ಆರಂಭವಾಗಿದೆ. ಕೊರೊನಾ ಸೋಂಕಿಗೆ ತುತ್ತಾಗಿರುವ ಕೆಲವು ಭಯೋತ್ಪಾದಕರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಅಂಚಿನಲ್ಲಿದ್ದಾರೆ ಎಂದು ವರದಿಗಳು ಹೇಳಿವೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಈ ಕುರಿತು ಮಾಹಿತಿ ನೀಡಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾಗದಲ್ಲಿರುವ ಭಯೋತ್ಪಾದಕ ಶಿಬಿರಗಳಲ್ಲಿ ಮಾರಕ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.
ಗುಪ್ತಚರ ಇಲಾಖೆಗೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾಗದಲ್ಲಿರುವ ಭಯೋತ್ಪಾದಕ ಶಿಬಿರಗಳಲ್ಲಿ ತರಬೇತಿ ಪಡೆಯುತ್ತಿರುವ ಕೆಲವು ಉಗ್ರರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಕುರಿತು ಶಿಬಿರದಲ್ಲಿದ್ದ ಓರ್ವ ಭಯೋತ್ಪಾದಕ ತನ್ನ ಕುಟುಂಬಸ್ಥರಿಗೆ ಫೋನ್ ಮಾಡಿ ಮಾಹಿತಿ ನೀಡಿರುವುದು ಗೊತ್ತಾಗಿದೆ ಎಂದು ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
ಕುಟುಂಬಸ್ಥರಿಗೆ ದೂರವಾಣಿ ಕರೆ ಮಾಡಿರುವ ಒರ್ವ ಭಯೋತ್ಪಾದಕ ಶಿಬಿರದಲ್ಲಿರುವ ಕೆಲವು ಭಯೋತ್ಪಾದಕರಿಗೆ ಕೊರೊನಾ ಸೋಂಕು ತಗುಲಿದ್ದು, ಇವರ ಕುರಿತು ಯಾರೂ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದು , ಈ ಕುರಿತು ಗುಪ್ತಚರ ಇಲಾಖೆ ಮಾಹಿತಿ ಕಲೆ ಹಾಕುತ್ತಿದೆ.
ಭಾರತದ ಗಡಿಯೊಳಗೆ ಕೊರೋನಾ ಪೀಡಿತ ಭಯೋತ್ಪಾದಕರನ್ನು ನುಗ್ಗಿಸಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಕೊರೊನಾ ವೈರಸ್ ಹರಡುವ ಹುನ್ನಾರವನ್ನು ಪಾಕ್ ಮಾಡಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ದಿಲ್ಬಾಗ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸೋಂಕಿತ ಭಯೋತ್ಪಾದಕರನ್ನು ಭಾರತದ ಗಡಿಯೊಳಗೆ ನುಗ್ಗಿಸಿ ಕಾಶ್ಮೀರ ಕಣಿವೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುವ ಯೋಜನೆಯನ್ನು ಪಾಕ್ ಮಾಡಿದ್ದರೆ ಅದನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ದಿಲ್ಬಾಗ್ ಸಿಂಗ್ ಎಚ್ಚರಿಸಿದ್ದಾರೆ.
ಪಾಕಿಸ್ತಾನದ ಗಡಿಯಲ್ಲಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ತಲಾ 50 ಭಯೋತ್ಪಾದಕರಿಗೆ ತರಬೇತಿ ನೀಡಬಲ್ಲ ಸುಮಾರು 20 ಭಯೋತ್ಪಾದಕ ಶಿಬಿರಗಳನ್ನು ಸ್ಥಾಪಿಸಿದ್ದರು. ಇದೀಗ ಇದೇ ಶಿಬಿರಗಳಲ್ಲಿ ಕೊರೊನಾ ವೈರಸ್ ಸೋಂಕಿನ ದಾಳಿ ಪ್ರಾರಂಭವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಇಲಾಖೆಯ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನದಲ್ಲಿ ಕೊರೊನಾ ವೈರಸ್ ಅರ್ಭಟ ಜೋರಾಗಿಯೇ ನಡೆಯುತ್ತಿದ್ದು, ಇಲ್ಲಿಯವರೆಗೆ 48 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದ್ದು, 1,017 ಜನರು ಮೃತಪಟ್ಟಿದ್ದಾರೆ. ಈ ಮೊದಲು ಕೊರೊನಾ ಸೋಂಕಿತರನ್ನು ಪಾಕಿಸ್ತಾನವು ಪಿಒಕೆಗೆ ಶಿಫ್ಟ್ ಮಾಡಲು ಮುಂದಾಗಿತ್ತು.ಆದರೆ ಇದಕ್ಕೆ ಗಿಲ್ಗಿಟ್ – ಬಾಲ್ಟಿಸ್ತಾನದ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ನೇತೃತ್ವದ ಪಾಕ್ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆದಿತ್ತು.
ಜಗತ್ತೇ ಕೊರೊನಾ ಮಹಾಮಾರಿಗೆ ತತ್ತರಿಸಿ ಒದ್ದಾಡುತ್ತಿದ್ದು, ಜನರ ಮಾರಣ ಹೋಮವೇ ನಡೆಯುತ್ತಿದ್ದರೂ ಪಾಕ್ ಮಾತ್ರ ಅದ್ಯಾವುದಕ್ಕೂ ತಲೆ ಕೆಡೆಸಿಕೊಳ್ಳದೇ ತನ್ನ ಹಳೆ ಚಾಳಿಯನ್ನು ಮುಂದುವರಿಸುತ್ತಾನೆ ಇದೆ. ನಿರಂತರವಾಗಿ ಕದನ ವಿರಾಮವನ್ನು ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯ ಬಳಿ ಗುಂಡಿನ ದಾಳಿ ನಡೆಸುತ್ತಾ ಇದೆ. ಪಾಕ್ ನಡೆಸುತ್ತಿರುವ ದಾಳಿಗೆ ಭಾರತೀಯ ಯೋಧರೂ ಕೂಡ
ತಕ್ಕ ಉತ್ತರ ನೀಡುತ್ತಿದೆ.
ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು
ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...








