ಫಲಿಸದ ಚೀನೀ ಲಸಿಕೆ – ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೋನಾ ಸೋಂಕು

1 min read
Pak pm test corona positive

ಫಲಿಸದ ಚೀನೀ ಲಸಿಕೆ – ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೋನಾ ಸೋಂಕು

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೊರೋನವೈರಸ್ ಧೃಡ ಪಟ್ಟಿದೆ ಎಂದು ದೇಶದ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಲಸಿಕೆ ಹಾಕಿದ ಎರಡು ದಿನಗಳ ನಂತರ ಪಾಕಿಸ್ತಾನದ ಪ್ರಧಾನಿಗೆ ಮಾರಣಾಂತಿಕ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
Imran khan
ಖಾನ್ ಮನೆಯಲ್ಲಿ ಐಸೋಲೇಶನ್ ಗೆ ಒಳಗಾಗಿದ್ದಾರೆ ಎಂದು ಸಚಿವ ಫೈಸಲ್ ಸುಲ್ತಾನ್ ಟ್ವೀಟ್ ನಲ್ಲಿ ಹೇಳಿದ್ದಾರೆ.

ಪಾಕ್ ಪ್ರಧಾನಿ ಅವರಿಗೆ ಕೊರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳದಿದ್ದರೂ ಸಹ ಮುಂಜಾಗೃತಾ ಕ್ರಮವಾಗಿ ಐಸೋಲೇಶನ್ ಗೆ ಒಳಪಡಿಸಲಾಗಿದೆ ಎಂದು ವರದಿಗಳು ತಿಳಿಸಿದೆ.
ವೈದ್ಯರ ತಂಡ ಇಮ್ರಾನ್ ಖಾನ್ ಅವರ ಆರೋಗ್ಯದ ಕುರಿತು ತೀವ್ರ ನಿಗಾ ಇರಿಸಿದ್ದಾರೆ.
ಗುರುವಾರ, ಇಮ್ರಾನ್ ಖಾನ್ ಚೀನಾದ ಕೊರೋನವೈರಸ್ ಲಸಿಕೆ ಸಿನೊಫಾರ್ಮ್ನ ಮೊದಲ ಡೋಸ್ ಅನ್ನು ತೆಗೆದುಕೊಂಡಿದ್ದರು.
Pak pm test corona positive

ಈ ಲಸಿಕೆಯನ್ನು ಪ್ರಸ್ತುತ ಪಾಕಿಸ್ತಾನಕ್ಕೆ ಮಾತ್ರ ಲಭ್ಯವಾಗುವಂತೆ ಮಾಡಲಾಗಿದೆ ಮತ್ತು ಎರಡು ಯಶಸ್ವಿ ಡೋಸ್ ಗಳ ನಂತರ ಪರಿಣಾಮಕಾರಿಯಾಗುತ್ತದೆ‌ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd