ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

PAK v BAN: ಡು-ಆರ್‌-ಡೈ ಪಂದ್ಯದಲ್ಲಿ ಪಾಕ್‌ಗೆ ಬಾಂಗ್ಲಾ ಸವಾಲು: ಬಾಬರ್‌ ಪಡೆಗೆ ಗೆಲುವು ಅನಿವಾರ್ಯ

C Dinesh by C Dinesh
October 31, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ನಲ್ಲಿ ಸತತ ಸೋಲುಗಳ ಸುಳಿಯಲ್ಲಿ ಸಿಲುಕಿರುವ ಪಾಕಿಸ್ತಾನ ಇಂದು ನಡೆಯುವ ಡು-ಆರ್‌-ಡೈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ಸವಾಲು ಎದುರಿಸಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮಹತ್ವದ ಹಣಾಹಣಿಗೆ ಕೊಲ್ಕತ್ತಾದ ಈಡನ್‌ ಗಾರ್ಡನ್ಸ್‌ ಸಜ್ಜಾಗಿದೆ.

ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದಿದ್ದ ಪಾಕಿಸ್ತಾನ ನಂತರದಲ್ಲಿ ಸತತ ನಾಲ್ಕು ಪಂದ್ಯಗಳಲ್ಲಿ ಸೋಲಿನ ಆಘಾತ ಅನುಭವಿಸಿದೆ. ಹೀಗಾಗಿ ಸದ್ಯ ಸೆಮೀಸ್‌ ರೇಸ್‌ನಿಂದ ಹೊರಗುಳಿಯುವ ಆತಂಕದಲ್ಲಿ ಸಿಲುಕಿರುವ ಪಾಕಿಸ್ತಾನಕ್ಕೆ ಇಂದಿನ ಪಂದ್ಯವನ್ನ ಗೆಲ್ಲಲೇಬೇಕಾದ ಒತ್ತಡ ಎದುರಾಗಿದೆ. ಒಂದೊಮ್ಮೆ ಈ ಪಂದ್ಯವನ್ನ ಸೋತಲ್ಲಿ ಬಾಬರ್‌ ಪಡೆಯ ಸಮಿಫೈನಲ್‌ ಪ್ರವೇಶದ ಕನಸು ಭಗ್ನಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಇಂದಿನ ಪಂದ್ಯಕ್ಕಾಗಿ ಪಾಕಿಸ್ತಾನ ಭರ್ಜರಿ ತಯಾರಿ ಮಾಡಿಕೊಂಡಿದೆ.

PAK v BAN

ಆರಂಭದ ಎರಡು ಪಂದ್ಯಗಳಲ್ಲಿ ನೆದರ್ಲೆಂಡ್ಸ್‌ ಹಾಗೂ ಶ್ರೀಲಂಕಾವನ್ನ ಮಣಿಸಿ ಆತ್ಮವಿಶ್ವಾಸದಲ್ಲಿದ್ದ ಪಾಕಿಸ್ತಾನ, ನಂತರದಲ್ಲಿ ನಡೆದ ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಹಾಗೂ ಸೌತ್‌ ಆಫ್ರಿಕಾ ತಂಡಗಳ ವಿರುದ್ಧ ಕೂಡ ಸೋಲಿನ ಆಘಾತ ಕಂಡಿತು. ಪ್ರಮುಖವಾಗಿ ಅಫ್ಘಾನಿಸ್ತಾನ ಮತ್ತು ಸೌತ್‌ ಆಫ್ರಿಕಾದ ಎದುರು ಅನುಭವಿಸಿದ ಸೋಲು, ಪಾಕಿಸ್ತಾನದ ಆತ್ಮವಿಶ್ವಾಸವನ್ನೇ ಕುಗ್ಗುವಂತೆ ಮಾಡಿದೆ. ಹೀಗಾಗಿ ಸತತ ಸೋಲುಗಳ ಈ ಆಘಾತದಿಂದ ಹೊರಬರುವ ತವಕದೊಂದಿಗೆ ಪಾಕಿಸ್ತಾನ, ಇಂದಿನ ಪಂದ್ಯಕ್ಕಾಗಿ ಸಜ್ಜಾಗಿದೆ.

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

February 3, 2026

ಪ್ರಮುಖವಾಗಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ನೀರಸ ಪ್ರದರ್ಶನ ನೀಡಿರುವ ಪಾಕಿಸ್ತಾನ, ಟೂರ್ನಿಯಲ್ಲಿ ನಿರೀಕ್ಷಿತ ಯಶಸ್ಸು ಪಡೆಯಲು ಸಾಧ್ಯವಾಗಿಲ್ಲ. ನಾಯಕ ಬಾಬರ್‌ ಆಜ಼ಂ ಸೇರಿದಂತೆ ಬ್ಯಾಟರ್‌ಗಳಾದ ಇಮಾಮ್‌-ಉಲ್‌-ಹಕ್‌, ಫಖರ್‌ ಜಮಾನ್‌, ಮೊಹಮ್ಮದ್‌ ರಿಜ್ವಾನ್‌ ಅವರುಗಳ ವೈಫಲ್ಯ ತಂಡಕ್ಕೆ ದೊಡ್ಡ ಹಿನ್ನಡೆ ಮೂಡಿಸಿದ್ದರೆ. ಇದರ ಜೊತೆಗೆ ಬೌಲಿಂಗ್‌ನಲ್ಲಿ ಕೂಡ ಯಾವುದೇ ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡದಿರುವುದು ತಂಡದ ವೈಫಲ್ಯಕ್ಕೆ ಕಾರಣವಾಗಿದೆ.

Bangladesh

ಮತ್ತೊಂದೆಡೆ ಬಾಂಗ್ಲಾದೇಶ ಕೂಡ ಟೂರ್ನಿಯಲ್ಲಿ ಆಘಾತಕಾರಿ ಫಲಿತಾಂಶ ಕಂಡಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಗೆಲುವು ಸಾಧಿಸಿದ್ದರ ಹೊರತಾಗಿ ನಂತರದ ಐದು ಪಂದ್ಯಗಳಲ್ಲಿ ಸೋಲು ಕಂಡಿದ್ದು, ಈಗಾಗಲೇ ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ. ಸದ್ಯ ಪಾಯಿಂಟ್ಸ್‌ ಟೇಬಲ್‌ ನಲ್ಲಿ 9ನೇ ಸ್ಥಾನದಲ್ಲಿರುವ ಬಾಂಗ್ಲಾದೇಶ, ಉಳಿದ ಪಂದ್ಯಗಳಲ್ಲಿ ಜಯದ ನಿರೀಕ್ಷೆ ಹೊಂದಿದ್ದು, ಇಂದಿನ ಪಂದ್ಯದಲ್ಲಿ ಪಾಕಿಸ್ತಾನವನ್ನ ಮಣಿಸುವ ಲೆಕ್ಕಾಚಾರದಲ್ಲಿದೆ.

ಪಾಕಿಸ್ತಾನ ತಂಡ: ಬಾಬರ್ ಅಜಮ್, ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ.

ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್, ಲಿಟ್ಟನ್ ಕುಮರ್ ದಾಸ್, ತಂಝೀದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೇದಿ ಹಸನ್, ತಾಸುರ್ ಮಹೇದಿ ಹಸನ್ , ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್.

PAK v BAN, Pakistan, Bangladesh, CWC 2023, ODI World Cup

Tags: BangladeshCWC 2023ODI World CupPAK v BANPakistan
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

by Shwetha
February 3, 2026
0

ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿರುವ ಈ ಮೆಗಾ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7...

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

by admin
January 29, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ...

CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

by admin
January 27, 2026
0

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ * ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ * * ಸಚಿವರು, ಶಾಸಕರು, ಐಎಎಸ್‌, ಐಪಿಎಸ್‌,...

ವಿಶ್ವಕಪ್ ನಿಂದ ಹಿಂದೆ ಸರಿದರೆ ಪಾಕಿಸ್ತಾನಕ್ಕೆ ಶಾಶ್ವತ ಗೇಟ್ ಪಾಸ್: ಐಸಿಸಿ ಖಡಕ್ ನಿರ್ಧಾರದಿಂದ ಪಿಸಿಬಿ ಕಂಗಾಲು

ವಿಶ್ವಕಪ್ ನಿಂದ ಹಿಂದೆ ಸರಿದರೆ ಪಾಕಿಸ್ತಾನಕ್ಕೆ ಶಾಶ್ವತ ಗೇಟ್ ಪಾಸ್: ಐಸಿಸಿ ಖಡಕ್ ನಿರ್ಧಾರದಿಂದ ಪಿಸಿಬಿ ಕಂಗಾಲು

by Shwetha
January 26, 2026
0

ಟಿ-20 ವಿಶ್ವಕಪ್ ಪಂದ್ಯಾವಳಿ ಸಮೀಪಿಸುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಬಾಂಗ್ಲಾದೇಶಕ್ಕೆ ಬೆಂಬಲ ವ್ಯಕ್ತಪಡಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram