ಪಾಕಿಸ್ತಾನ ತಂಡದ ಯುವ ವೇಗದ ಬೌಲರ್ ಶಾಹೀನ್ ಅಫ್ರಿದಿ, ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳನ್ನ ಪಡೆಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ಈ ಮಹತ್ವದ ಮೈಲುಗಲ್ಲು ತಲುಪಿದರು. ಬಾಂಗ್ಲಾದೇಶದ ತಜ಼ೀದ್ ಶಕೀಬ್ ಅವರ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ ಶಾಹೀನ್ ಅಫ್ರಿದಿ, ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ವೇಗದ ಬೌಲರ್ ಎನಿಸಿದರು. ಪಾಕ್ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿರುವ ಶಾಹೀನ್ ಅಫ್ರಿದಿ, ತಮ್ಮ 51 ಏಕದಿನ ಪಂದ್ಯದಲ್ಲಿ 100 ವಿಕೆಟ್‌ಗಳನ್ನ ಪಡೆದು ಮಿಂಚಿದ್ದಾರೆ. ಶಾಹೀನ್ ಅಫ್ರಿದಿ ಅವರಿಗೂ ಮುನ್ನ ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ ಬೌಲರ್‌ಗಳ ಸಾಲಿನಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಮೊದಲ ಸ್ಥಾನದಲ್ಲಿದ್ದರು. ಆಸೀಸ್ ತಂಡದ ಪ್ರಮುಖ ವೇಗದ ಬೌಲರ್ ಆಗಿರುವ ಸ್ಟಾರ್ಕ್, 50 ಇನ್ನಿಂಗ್ಸ್‌ಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 100 ವಿಕೆಟ್‌ಗಳ ಗಡಿದಾಟಿದ್ದರು.
ಇನ್ನೂ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 100 ವಿಕೆಟ್‌ಗಳನ್ನ ಪಡೆದಿರುವ ಬೌಲರ್‌ಗಳಲ್ಲಿ ನೇಪಾಳದ ಸ್ಟಾರ್ ಬೌಲರ್ ಸಂದೀಪ್ ಲಾಮಿಚನ್ನೆ, ಅಗ್ರ ಸ್ಥಾನದಲ್ಲಿದ್ದಾರೆ. ನೇಪಾಳ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿರುವ ಲಾಮಿಚನ್ನೆ, ಕೇವಲ 42 ಪಂದ್ಯಗಳಲ್ಲಿ 100 ವಿಕೆಟ್‌ಗಳನ್ನ ಪಡೆದು ವಿಶ್ವ ದಾಖಲೆ ಬರೆದಿದ್ದಾರೆ. ಇವರ ನಂತರದಲ್ಲಿ ಅಫ್ಘಾನಿಸ್ತಾನದ ಸ್ಪಿನ್ ಕಿಂಗ್ ರಶೀದ್ ಖಾನ್, 44 ಪಂದ್ಯಗಳಲ್ಲಿ 100 ವಿಕೆಟ್‌ಗಳನ್ನ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಅಲ್ಲದೇ ಒಟ್ಟಾರೆ ಲಿಸ್ಟ್‌ನಲ್ಲಿ ಶಾಹೀನ್ ಅಫ್ರಿದಿ, 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಶಾಹೀನ್ ಅಫ್ರಿದಿ, ಟೂರ್ನಿಯಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದಿರುವ ಬೌಲರ್‌ಗಳ ಲಿಸ್ಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಟೂರ್ನಿಯಲ್ಲಿ ಆಡಿರುವ 7 ಪಂದ್ಯಗಳಲ್ಲಿ 16 ವಿಕೆಟ್‌ಗಳನ್ನ ಪಡೆಯುವ ಮೂಲಕ ಅಬ್ಬರಿಸಿದ್ದಾರೆ.
PAK v BAN, SHAHEEN AFRIDI, Pakistan, Bangladesh, CWC 2023