T20 World Cup : ಮಿಂಚಿದ ಬಾಬರ್, ರಿಜ್ವಾನ್ – T20 ಯಲ್ಲಿ ಮೂರನೇ ಭಾರಿ ಫೈನಲ್ ತಲುಪಿದ ಪಾಕ್
ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡ 2022 ರ ಟಿ 20 ವಿಶ್ವಕಪ್ ಸಮರದಲ್ಲಿ ನ್ಯೂಜಿಲೆಂಡ್ ಮಣಿಸಿ ಪೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಪಾಕಿಸ್ತಾನ ತಂಡ 2009ರ ಬಳಿಕ ಟಿ20 ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ.
ನಾಯಕ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅರ್ಧಶತಕಗಳ ನೆರವಿನಿಂದ ಪಾಕಿಸ್ತಾನವು ನ್ಯೂಜಿಲೆಂಡ್ ಅನ್ನು ಏಳು ವಿಕೆಟ್ಗಳಿಂದ ಸೋಲಿಸಿ ಬುಧವಾರ ಟಿ20 ವಿಶ್ವಕಪ್ನ ಫೈನಲ್ಗೆ ಪ್ರವೇಶಿಸಿತು.
ಗ್ರೂಫ್ ಲೆವಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ತಂಡಕ್ಕೆ ವಿಶ್ವಕಪ್ ಗೆಲ್ಲುವ ಕನಸು ಮತ್ತೊಮ್ಮೆ ಭಗ್ನಗೊಂಡಿದೆ. 153 ರನ್ಗಳ ಗುರಿಯನ್ನು ಪಾಕಿಸ್ತಾನವು ಇನ್ನೂ ಐದು ಎಸೆತಗಳು ಬಾಕಿ ಇರುವಂತೆಯೇ ಮೂರು ವಿಕೆಟ್ ನಷ್ಟಕ್ಕೆ ಸಾಧಿಸಿತು.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯದ ವಿಜೇತರನ್ನು ಭಾನುವಾರದ ಫೈನಲ್ನಲ್ಲಿ ಪಾಕಿಸ್ತಾನ ಎದುರಿಸಲಿದೆ.
ಬುಧವಾರ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ 153 ರನ್ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ತಂಡವನ್ನು 7 ವಿಕೆಟ್ಗಳಿಂದ ಸೋಲಿಸಿತು. PAK ತಂಡ 19.1 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತು.
ಆರಂಭಿಕರಾದ ಬಾಬರ್ ಅಜಮ್ (53 ರನ್) ಮತ್ತು ಮೊಹಮ್ಮದ್ ರಿಜ್ವಾನ್ (57 ರನ್) ಬಿರುಸಿನ ಬ್ಯಾಟಿಂಗ್ ನಡೆಸಿದರು. ಇಬ್ಬರೂ 105 ರನ್ಗಳ ಆರಂಭಿಕ ಜೊತೆಯಾಟವನ್ನು ಹಂಚಿಕೊಂಡರು. ಟೂರ್ನಿಯುದ್ದಕ್ಕೂ ಇವರಿಬ್ಬರ ಓಪನಿಂಗ್ ಬಗ್ಗೆ ಎದ್ದಿದ್ದ ಪ್ರಶ್ನೆಗಳಿಗೆ ತಕ್ಕ ಉತ್ತರ ನೀಡಿದರು. ಪಾಕಿಸ್ತಾನ ಪರ ಶಾಹೀನ್ ಶಾ ಆಫ್ರಿದಿ ಅದ್ಭುತ ಬೌಲಿಂಗ್ ಮಾಡಿದರು. 4 ಓವರ್ ಗಳಲ್ಲಿ ಕೇವಲ 24 ರನ್ ನೀಡಿ 2 ವಿಕೆಟ್ ಪಡೆದರು.
PAK vs NZ: Babar, Rizwan shine as Pakistan beat New Zealand to reach their third T20 World Cup final








