ಎಸ್ ಸಿಒ, ಸಿಎಚ್ ಜಿ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಪಾಕಿಸ್ತಾನ ಆಹ್ವಾನ ನೀಡಿದೆ.
ಅಕ್ಟೋಬರ್ 15-16 ರಂದು ಯುರೇಷಿಯನ್ ಗುಂಪಿನ ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ ನಂತರ ಎರಡನೇ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ SCO ಶೃಂಗಸಭೆಯು ಈ ಬಾರಿ ಪಾಕಿಸ್ತಾನದಲ್ಲಿ ನಡೆಯಲಿದೆ. ಈ ವರ್ಷ ಖಝಾಕಿಸ್ತಾನದಲ್ಲಿ ನಡೆದ ದೇಶಗಳ ಮುಖ್ಯಸ್ಥರ ಶೃಂಗಸಭೆಗೆ ಗೈರಾಗಿದ್ದನ್ನು ಹೊರತುಪಡಿಸಿದರೆ ಮೋದಿ ಎಲ್ಲ ಸಭೆಯಲ್ಲಿಯೂ ಭಾಗವಹಿಸಿದ್ದರು. ಹೀಗಾಗಿ ಪಾಕಿಸ್ತಾನ್ ದಲ್ಲಿ ನಡೆಯಲಿರುವ ಈ ಸಭೆಗೆ ಹೋಗುತ್ತಾರೆಯೇ? ಎಂಬುವುದು ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಜುಲೈನಲ್ಲಿ ಸಂಸತ್ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಭೆ ಇದ್ದ ಹಿನ್ನೆಲೆಯಲ್ಲಿ ಅವರು ಭಾಗವಹಿಸಿರಲಿಲ್ಲ. ಕಳೆದ ಒಂದು ವರ್ಷದಿಂದ ಉಭಯ ದೇಶಗಳ ನಡುವಿನ ಸಂಬಂಧ ಉತ್ತಮವಾಗಿಲ್ಲ. ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿ ಅವರು ಅಂದಿನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಉತ್ತಮ ಬಾಂಧವ್ಯ ಆರಂಭಿಸಿದ್ದರು. ಬಿಷ್ಕೆಕ್‌ನಲ್ಲಿ ನಡೆದ ಸಿಎಚ್‌ಜಿ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗವಹಿಸಿದ್ದರು. ಆದರೆ, ಈ ಬಾರಿ ಯಾವುದೇ ಭಾರತೀಯ ಸಚಿವರಿಗೆ ಪಾಕಿಸ್ತಾನದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುತ್ತಾರೋ ಅಥವಾ ಇಲ್ಲವೋ ಎಂಬುವುದು ಇದುವರೆಗೂ ಸ್ಪಷ್ಟವಾಗಿಲ್ಲ.