ಕಲಬುರಗಿ : ಶಿವಮೊಗ್ಗ ರಾಗಿಗುಡ್ಡದಲ್ಲಿ ನಡೆದ ಘಟನೆ (Shivamogga Riots) ಪ್ರಕರಣದ ಹಿಂದೆ ಪಾಕ್, ನಿಷೇಧಿತ ಪಿಎಫ್ಐ ಹಾಗೂ ರಾಜ್ಯ ಸರ್ಕಾರದ ಕೈವಾಡವಿದೆ ಎಂದು ಶ್ರೀರಾಮ ಸೇನೆ (Sri Ram Sena) ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಹಾದಿ ಮನಸ್ಥಿತಿ ಹೊಂದಿರುವ ಮುಸ್ಲಿಂರು (Muslims), ಹಿಂದೂಗಳ ಮನೆ ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ. 2047ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ಪೂರೈಸುವ ಹೊತ್ತಿಗೆ, ಭಾರತದಲ್ಲಿ ಇಸ್ಲಾಮಿಕ್ ರಾಜ್ಯ ಮಾಡಬೇಕೆಂಬ ಉದ್ದೇಶ ಅವರದ್ದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ಕಾರ ಈ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಘಟನೆ ರಾಜ್ಯದ ಗೃಹ ಸಚಿವರಿಗೆ ಸಣ್ಣ ಘಟನೆ ಎಂದಂತಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವ, ಪೊಲೀಸರ ಎದುರೇ ಆವಾಜ್ ಹಾಕುವ ಸನ್ನಿವೇಶಗಳು ನಡೆದರೂ ಗೃಹ ಸಚಿವರ ಉಡಾಫೆ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.