ಪಾಕಿಸ್ತಾನ : ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಕೊಂದು ತನ್ನ 6 ಜನ ಮಕ್ಕಳ ಎದುರಲ್ಲೇ ಆಕೆಯನ್ನ ಕಡಾಯಿಯಲ್ಲಿ ಬೇಯಿಸಿದ ಅತಿ ಕ್ರೂರ ಘಟನೆಯ ಪಾಕಿಸ್ತಾನದಲ್ಲಿ ಬೆಳಕಿಗೆ ಬಂದಿದೆ..
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಇಂತಹ ಹೇಯ ಘಟನೆ ನಡೆದಿದೆ. ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆ ಕೋಣೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ನರ್ಗೀಸ್ ಎಂದು ಗುರುತಿಸಲಾಗಿದೆ. ಆರೋಪಿ ಪತಿ ಆಶಿಕ್ ಬಜಾರ್ ಎಜೆನ್ಸಿಯ ಶಾಲೆಯಲ್ಲಿ ವಾಚ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಘಟನೆ ಬಳಿಕ ಆರೋಪಿ ತನ್ನ ಮೂವರು ಮಕ್ಕಳ ಜೊತೆ ಪರಾರಿಯಾಗಿದ್ದಾನೆ..
ಆತನ ಮಗಳು (15) ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ಆಕೆಯ ಜೊತೆಗೆ ಉಳಿದ ಇಬ್ಬರು ಮಕ್ಕಳನ್ನ ರಕ್ಷಣಾ ಕೇಂದ್ರದಲ್ಲಿ ಇರಿಸಲಾಗಿದೆ….
ಆರೋಪಿ ಮೊದಲು ಪತ್ನಿಯನ್ನು ದಿಂಬಿನಿಂದ ಮೂಗು, ಬಾಯಿಯನ್ನು ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.. ನಂತರ ಮಕ್ಕಳ ಮುಂದೆಯೇ ಕಡಾಯಿಯಲ್ಲಿ ಬೇಯಿಸಿದ್ದಾನೆ. ಅಲ್ಲದೇ ಮಹಿಳೆಯ ಒಂದು ಕಾಲು ಕೂಡ ದೇಹದಿಂದ ಬೇರ್ಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಮಕ್ಕಳಿಂದ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ಧಾರೆ..