ನೂತನ ಪಾಕಿಸ್ತಾನದ ಪ್ರಧಾನಿಯಾಗಿ ನವಾಜ್ ಷರೀಫ್ ಆಯ್ಕೆ
ಪಾಕಿಸ್ತಾನ: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ನವಾಜ್ ಷರೀಫ್ ಸಹೋದರ ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.
342 ಸದಸ್ಯ ಬಲದ ಪಾಕಿಸ್ತಾನ ಸಂಸತ್ತು ‘ನ್ಯಾಷನಲ್ ಅಸೆಂಬ್ಲಿ’ಯಲ್ಲಿ ಪಿಟಿಪಿ ಪಕ್ಷದ ನಾಯಕ ಇಮ್ರಾನ್ ಖಾನ್ ವಿಶ್ವಾಸ ಮತಯಾಚನೆ ವೇಳೆ ಸೋಲು ಕಂಡಿದ್ದರು. ಹೀಗಾಗಿ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇದೀಗ 174 ಸದಸ್ಯರ ಬೆಂಬಲ ಹೊಂದಿರುವ ಶಹಬಾಜ್ ಷರೀಫ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಈ ಮೂಲಕ ಕಳೆದ ಕೆಲ ದಿನಗಳಿಂದ ಪಾಕಿಸ್ತಾನದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ಇದೀಗ ತೆರೆ ಬಿದ್ದಿದೆ.