ನಾಳೆಯೇ ಅವಿಶ್ವಾಸ ನಿರ್ಣಯವನ್ನ ಎದುರಿಸಲಿದ್ದಾರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್

1 min read

ನಾಳೆಯೇ ಅವಿಶ್ವಾಸ ನಿರ್ಣಯವನ್ನ ಎದುರಿಸಲಿದ್ದಾರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್‌ಗೆ ಹಿನ್ನಡೆಯಾಗಿದ್ದು, ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಡೆಪ್ಯೂಟಿ ಸ್ಪೀಕರ್ ಅವರು ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿರುವುದು ಅಸಾಂವಿಧಾನಿಕ ಎಂದು ದೇಶದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಪಾಕಿಸ್ತಾನ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು ನಿನ್ನೆ ಸರ್ವಾನುಮತದ ತೀರ್ಪು ನೀಡಿದೆ. ಪಾಕಿಸ್ತಾನದ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸುವ ಅಧ್ಯಕ್ಷ ಆರಿಫ್ ಅಲ್ವಿ ಅವರ ನಿರ್ಧಾರಕ್ಕೆ ವಿರುದ್ಧವಾಗಿ ರಾಷ್ಟ್ರೀಯ ಅಸೆಂಬ್ಲಿಯನ್ನು ಮರುಸ್ಥಾಪಿಸುವಂತೆ ನ್ಯಾಯಾಲಯವು ಆದೇಶಿಸಿತು ಮತ್ತು ಹೊಸ ಚುನಾವಣೆಯ ಆದೇಶವನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸಿದೆ.  ಜೊತೆಗೆ, ಅವಿಶ್ವಾಸ ನಿರ್ಣಯದ ಮೇಲಿನ ರಾಷ್ಟ್ರೀಯ ಅಸೆಂಬ್ಲಿ ಅಧಿವೇಶನವನ್ನು ನಾಳೆ, ಏಪ್ರಿಲ್ 9 ರಂದು ನಡೆಸಬೇಕು ಮತ್ತು ಮೋಷನ್ ಮೇಲೆ ಮತ ಹಾಕುವವರೆಗೆ ಮುಂದೂಡಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ನ್ಯಾಯಾಲಯ ಪಾಕ್  ರಾಷ್ಟ್ರೀಯ ಅಸೆಂಬ್ಲಿಯನ್ನು ಮರುಸ್ಥಾಪಿಸಿದೆ ಜೊತೆಗೆ ಪ್ರಧಾನ ಮಂತ್ರಿ ಮತ್ತು ಫೆಡರಲ್ ಮಂತ್ರಿಗಳು, ರಾಜ್ಯ ಮಂತ್ರಿಗಳು, ಸಲಹೆಗಾರರು ಇತ್ಯಾದಿಗಳನ್ನು ಏಪ್ರಿಲ್ 3 ರಿಂದ ತಮ್ಮ ತಮ್ಮ ಕಚೇರಿಗಳಿಗೆ ಮರುಸ್ಥಾಪಿಸಲಾಗಿದೆ ಎಂದು ಘೋಷಿಸಿದೆ.  ಅವಿಶ್ವಾಸ ನಿರ್ಣಯದ ಫಲಿತಾಂಶದ ದಿನ ಇಮ್ರಾನ್ ಖಾನ್ ಅವರನ್ನು ಪದಚ್ಯುತಗೊಳಿಸಿದರೆ ಅದೇ ಅಧಿವೇಶನದಲ್ಲಿ ಸದನದ ಹೊಸ ನಾಯಕನನ್ನು ಆಯ್ಕೆ ಮಾಡಬೇಕು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಾಲಯದ ತೀರ್ಪಿನ ನಂತರ, ಪ್ರಧಾನಿ ಇಮ್ರಾನ್ ಖಾನ್ ಅವರು ಇಂದು ಕ್ಯಾಬಿನೆಟ್ ಸಭೆಯನ್ನ ಕರೆದಿದ್ದಾರೆ ಮತ್ತು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವುದಾಗಿ ತಿಳಿಸಿದ್ದಾರೆ.

ಇಮ್ರಾನ್ ಖಾನ್ ಸೋತರೆ, ಅವಿಶ್ವಾಸ ಮತದ ಮೂಲಕ ಪದಚ್ಯುತಗೊಂಡ ಪಾಕಿಸ್ತಾನದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd