ಪಾಕಿಸ್ತಾನದಲ್ಲಿ ಬಸ್ ಪಲ್ಟಿ – ಭೀಕರ ಅಪಘಾತದಲ್ಲಿ 18 ಮಂದಿ ಬಲಿ

1 min read

ಪಾಕಿಸ್ತಾನದಲ್ಲಿ ಬಸ್ ಪಲ್ಟಿ – ಭೀಕರ ಅಪಘಾತದಲ್ಲಿ 18 ಮಂದಿ ಬಲಿ

ಪಾಕಿಸ್ತಾನ :  ಪಾಕಿಸ್ತಾನದ ಬಲೂಚಿಸ್ತಾನದ ಖುಜ್ದಾರ್‌ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ದುರಂತದಲ್ಲಿ 18 ಮಂದಿ ಮೃತಪಟ್ಟು, 30 ಜನರು ಗಾಯಗೊಂಡಿರುವುದಾಗಿ ವರದಿಯಾಗಿದೆ. ವಾಧ್‌ನಿಂದ ದಾಬುಗೆ ತೆರಳುತ್ತಿದ್ದ ಬಸ್‌, ಖುಜ್ದಾರ್‌ ಜಿಲ್ಲೆಯ ಖೋರಿ ಬಳಿ ಪಲ್ಟಿಯಾಗಿದೆ. ಬಸ್‌ ವೇಗವಾಗಿ ಚಲಿಸುತ್ತಿದ್ದಾಗ, ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಬಸ್‌ ಪಲ್ಟಿಯಾಗಿದೆ ಎಂದು ಮೂಲಗಳು ತಿಳಿಸಿವೆ.

15 ಜನರು ಸ್ಥಳದಲ್ಲಿಯೇ ಮೃತಪಟ್ಟರೆ, ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ಗಾಯಗೊಂಡವರನ್ನು ಖುಜ್ದಾರ್‌ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ. ಇನ್ನೂ ಇದೇ ವಾರದ ಆರಂಭದಲ್ಲಿ, ಸಿಂಧ್ ಪ್ರಾಂತ್ಯದ ಎರಡು ರೈಲುಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 62 ಜನರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತೆ ಸಂಭವಿಸಿದೆ..

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd