International News : ಭಾರತದ ಜೊತೆಗೆ ಧಾರ್ಮಿಕ ಪ್ರವಾಸೋದ್ಯಮ ಆರಂಭಕ್ಕೆ ಪಾಕ್ ಚಿಂತನೆ
ಸದಾ ಭಾರತದ ವಿರುದ್ಧ ಕತ್ತಿ ಮಸೆಯುವ ಪಾಕಿಸ್ತಾನ ಈಗ ಭಾರತದ ಜೊತೆ ಧಾರ್ಮಿಕ ಪ್ರವಾಸೋದ್ಯಮವನ್ನು ಆರಂಭಿಸುವ ಬಗ್ಗೆ ಭಾರತದ ಜೊತೆಗೆ ಮಾತು ಕತೆ ನಡೆಸುವ ಚಿಂತನೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಡಳಿತ ಪಕ್ಷದ ಪ್ರಮುಖ ಹಿಂದೂ ಸಂಸದರೊಬ್ಬರು ಈ ಪ್ರಸ್ತಾವ ಸಲ್ಲಿಸಿದ್ದೂ ಅಲ್ಲದೇ ಇದನ್ನು ಪಾಕಿಸ್ತಾನ ವಿದೇಶಾಂಗ ಕಚೇರಿಯೂ ಬೆಂಬಲಿಸಿದೆ ಎಂದು ತಿಳಿದುಬಂದಿದೆ..
ಇನ್ನೂ ಪ್ರಸ್ತಾವನೆಯು ಭಾರತ ಸರ್ಕಾರದ ಅನುಮೋದನೆಗಾಗಿ ಕಾಯುತ್ತಿರುವುದಾಗಿಯೂ ಹೇಳಲಾಗಿದೆ. ಪಾಕಿಸ್ತಾನ ಅಂತರರಾಷ್ಟ್ರೀಯ ವಿಮಾನ ಸಂಸ್ಥೆಯ ವಿಶೇಷ ವಿಮಾನದ ಮೂಲಕ ಪಾಕಿಸ್ತಾನ ಯಾತ್ರಾರ್ಥಿಗಳ ನಿಯೋಗವೊಂದು ಜನವರಿ 29 ರಂದು ಭಾರತಕ್ಕೆ ಹೊರಡಲಿದೆ. ತಾವು ಇದರ ನೇತೃತ್ವ ವಹಿಸುವುದಾಗಿ ಪಾಕಿಸ್ತಾನ ಹಿಂದೂ ಪರಿಷತ್ತಿನ ಮುಖ್ಯಸ್ಥ ಮತ್ತು ರಾಷ್ಟ್ರ ಸಂಸತ್ತಿನ ಸದಸ್ಯ ಡಾ.ರಮೇಶ್ ಕುಮಾರ್ ವಂಕ್ವಾನಿ ಹೇಳಿದ್ದಾರೆ.
pakisthan – india – pak plans of reliogus tour in india
ಮೂರು ದಿನಗಳ ಕಾಲ ಈ ನಿಯೋಗ ಭಾರತದಲ್ಲಿ ಇರಲಿದೆ. ಈ ವೇಳೆ ದೆಹಲಿಯ ನಿಜಾಮುದ್ದೀನ್ ಔಲಿಯಾ ದರ್ಗಾ, ಅಜ್ಮೀರ್ನ ಖವಾಜ್ ಘರೀಬ್ ನವಾಜ್ ದರ್ಗಾ ಮತ್ತು ಆಗ್ರಾದ ತಾಜ್ ಮಹಲ್ಗೆ ಭೇಟಿ ನೀಡಲು ಯೋಜಿಸಿದೆ ಎಂದು ರಮೇಶ್ ಹೇಳಿದ್ದಾರೆ.