ಪಾಕ್ ನಲ್ಲಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದ ಹಿಂದೂ ದೇಗುಲದ ಪುನರ್ ನಿರ್ಮಾಣಕ್ಕೆ 3.48 ಕೋಟಿ ರೂ. ಬಿಡುಗಡೆ..!
ಪಾಕಿಸ್ತಾನ : ಪಾಕಿಸ್ತಾನದಲ್ಲಿ ಕಳೆದ ವರ್ಷ ಡಿಸೆಂಬರ್ 30ರಂದು ಕಿಡಿಗೇಡಿಗಳು ಧ್ವಂಸಗೊಳಿಸಿದ್ದ ಹಿಂದೂ ದೇವಾಲಯದ ಪುನರ್ ನಿರ್ಮಾಣಕ್ಕಾಗಿ ಪಾಕಿಸ್ತಾನದ ಸರ್ಕಾರ 3.48 ಕೋಟಿ ರೂ. ಬಿಡುಗಡೆ ಮಾಡಿದೆ.
ಕರಕ್ ಜಿಲ್ಲೆಯ ಟೆರ್ರಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಪರಮಹನ್ಸ್ ಜೀ ಮಹಾರಾಜ್ ಅವರ ಸಮಾಧಿಯ ಪುನರ್ನಿರ್ಮಾಣಕ್ಕಾಗಿ ಪ್ರಾಂತೀಯ ಸರ್ಕಾರವು ಅಕಾಫ್ ಇಲಾಖೆಗೆ ಹಣ ಬಿಡುಗಡೆ ಮಾಡಿದೆ.
ಒಂದು ಶತಮಾನದಷ್ಟು ಹಳೆಯದಾದ ದೇವಾಲಯದ ಮೇಲೆ ನಡೆದ ದಾಳಿಯನ್ನು ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮುಖಂಡರು ತೀವ್ರವಾಗಿ ಖಂಡಿಸಿದ್ದರು. ದೇವಾಲಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರಂತೆ ಸರ್ಕಾರ ಹಣ ಬಿಡುಗಡೆ ಮಾಡಿದೆ.








