Pallavi Joshi : ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣದ ವೇಳೆ ಗಾಯಗೊಂಡ ನಟಿ ಪಲ್ಲವಿ…
ಕಾಶ್ಮೀರ ಫೈಲ್ಸ್‌ನ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಮತ್ತು ವಿವೇಕ್ ಅಗ್ನಿಹೋತ್ರಿ ಅವರ ಪತ್ನಿ ಪಲ್ಲವಿ ಜೋಶಿ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಹೈದರಾಬಾದ್‌ನಲ್ಲಿ ಶೂಟಿಂಗ್ ಮಾಡುವಾಗ ನಟಿ ಪಲ್ಲವಿ ‘ದಿ ವ್ಯಾಕ್ಸಿನ್ ವಾರ್’ ಸೆಟ್‌ನಲ್ಲಿ ಗಾಯಗೊಂಡಿದ್ದಾರೆ.
ವಾಹನವೊಂದು ನಿಯಂತ್ರಣ ತಪ್ಪಿ ನಟಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳದ ಮೂಲಗಳು ತಿಳಿಸಿವೆ. ಗಾಯದ ಹೊರತಾಗಿಯೂ, ನಟಿ ತಮ್ಮ ದೃಶ್ಯವನ್ನ ಪೂರ್ಣಗೊಳಿಸಿ ನಂತರ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದಾರೆ. ಇದೀಗ ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ.
ಕೋವಿಡ್-19 ಸಾಂಕ್ರಾಮಿಕತೆಯ ಸಂದರ್ಭದಲ್ಲಿ ಕರೋನಾ ವ್ಯಾಕ್ಸಿನ್ ಕಂಡು ಹಿಡಿಯಲು ವಿಜ್ಞಾನಿಗಳ ಸಾಹಸವನ್ನ ಚಿತ್ರ ತೋರಿಸುತ್ತದೆ ಮತ್ತು ದಿ ವ್ಯಾಕ್ಸಿನ್ ವಾರ್ ಮೂಲಕ ಅವರಿಗೆ ಗೌರವ ಸಲ್ಲಿಸಲಾಗುತ್ತದೆ.
ಪಲ್ಲವಿ ಜೋಶಿ ನಿರ್ಮಿಸುತ್ತಿರುವ ಈ ಚಿತ್ರ ಹಿಂದಿ, ಇಂಗ್ಲಿಷ್, ತೆಲುಗು, ತಮಿಳು, ಮಲಯಾಳಂ, ಕನ್ನಡ, ಭೋಜ್‌ಪುರಿ, ಪಂಜಾಬಿ, ಗುಜರಾತಿ, ಮರಾಠಿ ಮತ್ತು ಬೆಂಗಾಲಿ ಸೇರಿದಂತೆ 10 ಕ್ಕೂ ಹೆಚ್ಚು ಭಾಷೆಗಳಲ್ಲಿ ಆಗಸ್ಟ್ 15, 2023 ರಂದು ಬಿಡುಗಡೆಯಾಗಲಿದೆ.
Pallavi Joshi : Actress Pallavi got injured during the shooting of ‘The Vaccine War’…