ಪಂಚಮಸಾಲಿ ಮೀಸಲಾತಿ ಹೋರಾಟ : ಬಸವರಾಜ್ ಬೊಮ್ಮಾಯಿ ಹೇಳಿದ್ದೇನು..?
ಬೆಂಗಳೂರು : ಅರಮನೆ ಮೈದಾನದಲ್ಲಿ ಪಂಚಮಸಾಲಿ ಸಮಾಜದ ರಣಕಹಳೆ ಮೊಳಗಿದೆ. ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವಂತೆ ಒತ್ತಾಯಿಸಿ ಕೂಡಲಸಂಗಮದ ಜಯಮೃತ್ಯಂಜಯ ಶ್ರೀ ನೇತೃತ್ವದ ಪಾದಯಾತ್ರೆಯ ಸಮಾರೋಪ ಸಮಾರಂಭ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಈ ಬಗ್ಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಹೋರಾಟದ ಬಗ್ಗೆ ಸಿಎಂ ಜತೆ ಮಾತನಾಡಿದ್ದೇವೆ. ಹಿಂದುಳಿದ ವರ್ಗಗಳ ಆಯೋಗ ಸಭೆ ನಡೆಸಿ ಈ ಬಗ್ಗೆ ಸಮಾಲೋಚಿಸಲಿದೆ. ಸಂವಿಧಾನದ ಪ್ರಕಾರ ಆಯೋಗದ ಮೂಲಕವೇ ಶಿಫಾರಸು ಬರಬೇಕು. ಈ ಮಧ್ಯೆ ಇಂದು ಪಂಚಮಸಾಲಿ ಸಮಾವೇಶ ನಡೀತಿದೆ. ಸ್ವಾಮೀಜಿಗಳ ಜತೆ ಈಗಾಗಲೇ ಮಾತಾಡಿದ್ದೇವೆ. ಸರ್ಕಾರದ ಕ್ರಮಗಳ ಕುರಿತು ಸ್ವಾಮಿಜಿಗಳಿಗೆ ಮನವರಿಕೆ ಮಾಡಿಕೊಡುತ್ತೇವೆ. ಇಂದು ಸಮಾವೇಶದಲ್ಲೂ ಈ ವಿಚಾರ ಹೇಳ್ತೆವೆ.
ಸರ್ಕಾರ ಇದುವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮನವರಿಕೆ ಮಾಡ್ತೇವೆ. ಮಾತುಕತೆಗೆ ಬನ್ನಿ ಅಂತ ಸ್ವಾಮೀಜಿಗಳನ್ನು ಆಹ್ವಾನಿಸ್ತೇವೆ. ಸಿಎಂ ಯಡಿಯೂರಪ್ಪ ಇದೇ ಮಾತನ್ನು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಮಾತುಕತೆ ಮೂಲಕ ನಡೆಸಬೇಕಾದ ಪ್ರಕ್ರಿಯೆ ಕುರಿತು ಚರ್ಚೆ ಮಾಡೋಣ ಅಂತ ಸಿಎಂ ಹೇಳಿದ್ದಾರೆ ಎಂದ್ರು.
ಇನ್ನು ಸ್ವಾಮೀಜಿಗಳ ಜೊತೆಗೂ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಹೀಗಾಗಿ ಇದರ ಬಗ್ಗೆ ಮುರುಗೇಶ್ ನಿರಾಣಿ ಹಾಗೂ ಸಿಸಿ ಪಾಟೀಲ್ ಸಮಾವೇಶದಲ್ಲಿ ಸ್ಥಾಮೀಜಿಗಳಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.