Pancharatna Yatra-ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷವು ತನ್ನ ತಯಾರಿಯನ್ನು ಭರ್ಜರಿಯಿಂದ ನಡೆಸಲು ರಣಕಹಳೆ ಮೊಳಗಿಸಲು ಸಜ್ಜಾಗಿದೆ.ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಪಂಚರತ್ನ ರಥಯಾತ್ರೆ’ ಕರ್ನಾಟಕ ರಾಜ್ಯೋತ್ಸವ ದಿನವಾದ ಇಂದು ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಲ್ಲಿ ಆರಂಭವಾಗಿದೆ. ಇಂದು ಬೆಳಗ್ಗೆ 9 ಗಂಟೆಗೆ ಕುರುಡುಮಲೆಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ರಥಯಾತ್ರೆಗೆ ಚಾಲನೆ ಮಾಡಿದ್ದಾರೆ.
ಡಿ.6ರವರೆಗೆ ಈ ಯಾತ್ರೆಯು ನಡೆಯಲಿದೆ , ಕ್ಷೇತ್ರಗಳಾದ 36 ಜಿಲ್ಲೆಗಳಲ್ಲಿ ಒಟ್ಟು ಎಂಟು ವಿಧಾನಸಭಾ ಹಳೆ ಮೈಸೂರು ಭಾಗದ ಸಂಚರಿಸಲಿದೆ. ಮುಂದಿನ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಗುರಿ ಹೊಂದಿರುವ ಪಕ್ಷವು, ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಬೇಕೆಂಬ ಉದ್ದೇಶ ಹೊಂದಿದೆ. ಇದಕ್ಕಾಗಿ ಪಂಚರತ್ನ ಯಾತ್ರೆ ಹೆಸರಿನಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಪಂಚರತ್ನ ಪರಿಪೂರ್ಣ ಪರಿಹಾರ ಎಂದು ಬಿಂಬಿಸಲಾಗುತ್ತಿದೆ. ಶಿಕ್ಷಣವೇ ಆಧುನಿಕ ಶಕ್ತಿ, ಆರೋಗ್ಯ ಸಂಪತ್ತು, ರೈತ ಚೈತನ್ಯ, ವಸತಿಯ ಆಸರೆ ಹಾಗೂ ಯುವ ನವಮಾರ್ಗ ಮತ್ತು ಮಹಿಳಾ ಸಬಲೀಕರಣ ಪಂಚರತ್ನ ಯೋಜನೆಗಳಾಗಿವೆ. ಚುನಾವಣೆ ಪ್ರಣಾಳಿಕೆಯಲ್ಲಿ ಕೂಡ ಈ ಐದು ಅಂಶಗಳೇ ಪ್ರಮುಖ ಯೋಜನೆಗಳಾಗಿರುತ್ತವೆ ಎಂದು ಸೋಮವಾರ ಸುದ್ದಿಗಾರರಿಗೆ ವಿವರ ನೀಡಿದರು.
ಬಳಿಕ ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದ ಜಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮಾಜಿ ಸಚಿವರು, ಎಲ್ಲ ವಿಧಾನಸಭಾ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಅಕ್ಟೋಬರ್ 27ರಂದು ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಂಚರತ್ನ ರಥಯಾತ್ರೆಗೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿತ್ತು.
ಪಂಚರತ್ನ ಯೋಜನೆಗಳು
1. ಸಂಪೂರ್ಣ ಉಚಿತ ಶಿಕ್ಷಣ
2. ಉಚಿತ ಆರೋಗ್ಯ ಸೇವೆ
3. ರೈತಪರ ಯೋಜನೆಗಳು
4. ಪ್ರತಿಯೊಬ್ಬರಿಗೂ ವಸತಿ
5. ಯುವ, ಮಹಿಳಾ ಯೋಜನೆ