ಮಡಿಕೇರಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹಲವು ಬಾರಿ ಚರ್ಚೆ ಆಗಿದೆ. ಯಾರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಯಾರಿಗೆ ಸಚಿವಸ್ಥಾನ ಕೊಡಬೇಕು ಎಂಬುದನ್ನು ಕೇಂದ್ರ ನಾಯಕರು ನಿರ್ಧರಿಸಲಿದ್ದಾರೆ. ಸದ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ಮತ್ತು ಅಧಿವೇಶನ ಇರುವುದರಿಂದ ಅವೆರಡು ಮುಗಿದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಸುಳಿವು ನೀಡಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದ ಬಿಜೆಪಿ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ವಿಜಯೇಂದ್ರ, ಬಿಜೆಪಿಯಲ್ಲಿ ಮೂಲ, ವಲಸೆ ಎನ್ನುವ ಭೇದಭಾವವಿಲ್ಲ, ಕಾಂಗ್ರೆಸ್, ಜೆಡಿಎಸ್ನಲ್ಲಿ ಬೇಸತ್ತು ಶಾಸಕರು ಬಿಜೆಪಿ ಸೇರಿ ಚುನಾವಣೆಯಲ್ಲಿ ಗೆಲುವು ಪಡೆದು ಸಚಿವರಾಗಿದ್ದಾರೆ. ಬಿಜೆಪಿ ಬಹುಮತ ಪಡೆಯದಿದ್ದಾಗ ಹೊರಗಿನಿಂದ ಬಂದ ಶಾಸಕರು ಬಿಜೆಪಿ ಅಧಿಕಾರ ನಡೆಸುವಂತೆ ಮಾಡಿದ್ದಾರೆ. ಹೀಗಾಗಿ ಅವರೆಲ್ಲರಿಗೂ ಸಚಿವ ಸ್ಥಾನ ಕೊಡುವುದಕ್ಕೆ ಕೇಂದ್ರ ನಾಯಕರು ನಿರ್ಧರಿಸಿದ್ದಾರೆ ಎಂದರು.
ಸಿದ್ಧರಾಮಯ್ಯ ಯಾರು, ವಿಜಯೇಂದ್ರ ಕಿಡಿ..!
ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಅನ್ನೋಕೆ ಸಿದ್ದರಾಮಯ್ಯ ಯಾರು. ಸಿಎಂ ಸ್ಥಾನದಿಂದ ಬಿಎಸ್ವೈ ಬದಲಾಗಲಿದ್ದಾರೆ ಎನ್ನುವ ಪ್ರಶ್ನೆಯನ್ನು ಇನ್ನೂ ಮೂರು ವರ್ಷಗಳ ಕಾಲ ನೀವು ಕೇಳುತ್ತಲೇ ಇರುತ್ತೀರಿ. ಆದರೆ, ಬಹುಮತದಿಂದ ಸರ್ಕಾರ ರಚನೆ ಮಾಡಿರುವ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಮುಂದಿನ ಮೂರು ವರ್ಷಗಳಲ್ಲೂ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ ಎಂದರು.
ಮುಖ್ಯಮಂತ್ರಿ ಆಗುವುದಕ್ಕೆ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವೆ ಪೈಪೋಟಿ ಶುರುವಾಗಿದೆ. ಹೀಗಾಗಿ ಅದಕ್ಕಾಗಿಯೇ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಇಂತಹ ಪ್ರಶ್ನೆ ಕೇಳುತ್ತಿರುತ್ತಾರೆ. ಅಷ್ಟಕ್ಕೂ ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾಗುತ್ತಾರೆ ಎನ್ನುವ ವಿಷಯವನ್ನು ಕೇಳುವುದಕ್ಕೆ ಬಿಜೆಪಿಗೆ ಸಿದ್ದರಾಮಯ್ಯ ಯಾರು ಕಿಡಿಕಾರಿದ್ದಾರೆ.
ಸಿ.ಟಿ ರವಿ ಅವರ ಕಚೇರಿ ಉದ್ಘಾಟನೆಗೆಂದು ಹೋದ ಶಾಸಕರು, ಸಚಿವರು ಹೋಗಿದ್ದರು. ಸಿ.ಟಿ. ರವಿ ಅವರು ಕಚೇರಿ ಉದ್ಘಾಟನೆಗೆ ನನ್ನನ್ನೂ ಆಹ್ವಾನಿಸಿದ್ದರು. ಆದರೆ, ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದರಿಂದ ಹೋಗಲು ಸಾಧ್ಯವಾಗಿಲ್ಲ. ಕೇಂದ್ರ ನಾಯಕರನ್ನು ಶಾಸಕರು, ಸಚಿವರು ಭೇಟಿಯಾಗಿರುವುದಕ್ಕೆ ವಿಶೇಷ ಅರ್ಥ ಬೇಡ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel