ಬೆಂಗಳೂರಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಅಮೂಲ್ಯ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ನಿನ್ನೆ ರಾತ್ರಿ ಅಮೂಲ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು, ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ 5ನೇ ಎಸಿಎಂಎ ನ್ಯಾಯಾಧೀಶ ಶಿರಿನ್ ಜೆ ಅನ್ಸಾರಿ ಅವರ ನಿವಾಸಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಫೆಬ್ರವರಿ 23ರವರೆಗೂ ನ್ಯಾಯಾಂಗ ಬಂಧನದಲ್ಲಿ ಇರುವ ಅಮೂಲ್ಯಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಮುಸ್ಲಿಂ, ಸಿಖ್, ಈಸಾಯಿ ಫೆಡರೇಷನ್ ನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ಭಿತ್ತಿಪತ್ರಗಳನ್ನು ಹಿಡಿದು ನಿಂತಿದ್ದ ಅಮೂಲ್ಯಗೆ ಮಾತನಾಡಲು ಆಹ್ವಾನಿಸಲಾಯಿತು. ಮೈಕ್ ಸಿಗುತ್ತಿದ್ದಂತೆ ಪಾಕಿಸ್ತಾನ್ ಜಿಂದಾಬಾದ್ ಎಂದು ಅಮೂಲ್ಯ ಕೂಗಿದ್ದರು. ಇದಕ್ಕೆ ವೇದಿಕೆಯಲ್ಲಿದ್ದ ಓವೈಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಅಮೂಲ್ಯ ಅವರನ್ನು ಬಂಧನಕ್ಕೊಳಪಡಿಸಿದ್ದರು.
ಮಂಗನಬಾವು ಭೀತಿ: ವಸತಿ ಶಾಲೆಗೆ 3 ದಿನ ರಜೆ
ಮಂಗನಬಾವು ಸೋಂಕು ರಾಜ್ಯದಲ್ಲಿ ಆತಂಕ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ...