ಪ್ಯಾರೇ ದೇಶ್ ವಾಸಿಯೋ ಗಮನಿಸಿ : ಮತ್ತೆ ತೈಲ ಬೆಲೆ ಏರಿಕೆ
ಮುಂಬೈ : ದೇಶದಲ್ಲಿ ಮತ್ತೆ ತೈಲ ಬೆಲೆ ಏರಿಕೆಯಾಗಿದೆ. ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 25 ರಿಂದ 30 ಪೈಸೆ ಹಾಗೂ ಡೀಸೆಲ್ ಮೇಲೆ 28 ರಿಂದ 32 ಪೈಸೆ ಹೆಚ್ಚಳವಾಗಿದೆ.
25 ಪೈಸೆ ಏರಿಕೆಯೊಂದಿಗೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.64 ರೂ. ಹಾಗೂ 30 ಪೈಸೆ ಹೆಚ್ಚಳದೊಂದಿಗೆ ಡೀಸೆಲ್ ದರ 89.87 ರೂ.ಗೆ ಏರಿಕೆಯಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.18ಕ್ಕೆ ಹಾಗೂ ಡೀಸೆಲ್ ದರ 95.38 ರೂ.ಗೆ ಏರಿಕೆಯಾಗಿದೆ.
ಇನ್ನು ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 102.17 ರೂ. ಡಿಸೇಲ್ ಬೆಲೆ 92.97 ರೂ. ಮುಂಬೈನಲ್ಲಿ ಪೆಟ್ರೋಲ್ 107.71 ರೂ. ಡಿಸೇಲ್ ಬೆಲೆ 97.52 ರೂ. ಚೆನ್ನೈನಲ್ಲಿ ಪೆಟ್ರೋಲ್ 99.36 ರೂ. ಡಿಸೇಲ್ 94.45 ರೂ. ಆಗಿದೆ.