ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಆಯವ್ಯಯ ಮಂಡಿಸಲು ಮುಂದಾಗಿದ್ದಾರೆ.
ಈ ಬಜೆಟ್ ಮಂಡನೆ ಮೂಲಕ ಅವರು ಹೊಸ ದಾಖಲೆ ಬರೆಯಲಿದ್ದಾರೆ. ಹಣಕಾಸು ಸಚಿವರಾಗಿ ಸತತ 6 ಬಜೆಟ್ ಮಂಡಿಸಿದ್ದ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಸಾಧನೆಯನ್ನ ನಿರ್ಮಲಾ ಸೀತಾರಾಮನ್ ಹಿಂದೆ ಹಾಕಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ವರದಿ ಮಂಡಿಸಲಿದ್ದಾರೆ. ಬಜೆಟ್ ಮೇಲೆ ಭಾರೀ ನಿರೀಕ್ಷೆಗಳನ್ನೇ ಇಟ್ಟುಕೊಳ್ಳಲಾಗಿದೆ.
ರಸಗೊಬ್ಬರ, ಕೃಷಿ ರಾಸಾಯನಿಕಗಳ ಮೇಲೆ ಸಹಾಯಧನ ನೀಡುವ ಸಾಧ್ಯತೆ ಇದೆ. ಜತೆಗೆ ಉದ್ಯೋಗ ಖಾತ್ರಿಯಡಿ ದಿನಗೂಲಿ ಹೆಚ್ಚಿಸುವ ನಿರೀಕ್ಷೆ ಇದೆ. ಕೃಷಿ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಿಸುವ ನಿರೀಕ್ಷೆ ಇದೆ. ವೇತನದಾರರಿಗೆ ಇನ್‌ಕಂ ಟ್ಯಾಕ್ಸ್ ರಚನೆಯಲ್ಲಿ ಬದಲಾವಣೆ ಹಾಗೂ ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ನಿರೀಕ್ಷೆ ಇದೆ. ವೈಯಕ್ತಿಕ ಆದಾಯ ತೆರಿಗೆ ಮಿತಿ ಹೆಚ್ಚಿಸುವ ಸಾಧ್ಯತೆ. ಇನ್ನೊಂದೆಡೆ ಮೋದಿ ಸರ್ಕಾರ ಕಟ್ಟಿ ಹಾಕಿ ಮುಜುಗರ ಉಂಟು ಮಾಡಲು ವಿಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ.








