ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ PUC
ಬೆಂಗಳೂರು : ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಬೇಕು ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಈ ಕುರಿತು ವಿಧಾನಸೌಧದ ಮುಂದೆ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಐಸಿಎಸ್ ಇ ಹಾಗೂ ಸಿಬಿಎಸ್ ಇ ಪರೀಕ್ಷೆಗಳನ್ನ ನಡೆಸದೇ ಪಾಸ್ ಮಾಡಿದೆ.
ಅದೇ ರೀತಿ ರಾಜ್ಯದ ಮುಖ್ಯಮಂತ್ರಿ ಹಾಗೂ ಶಿಕ್ಷಣ ಮಂತ್ರಿ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಯ ಲಾಬಿಗೆ ಮಣಿಯದೇ ಕೂಡಲೇ ಪರೀಕ್ಷೆ ರದ್ದತಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಇನ್ನು ವಿದ್ಯಾರ್ಥಿಗಳ ಜೀವ ಅತ್ಯಮೂಲ್ಯವಾಗಿದ್ದು, ಕೊರೊನಾ ಮಹಾಮಾರಿಯಿಂದ ಯುವಜನತೆ ಪಾರು ಮಾಡಬೇಕಾದರೆ ಪರೀಕ್ಷೆ ಇಲ್ಲದೇ ಪಾಸ್ ಮಾಡಿ ಎಂದು ಒತ್ತಾಯಿಸಿದರು.