ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕು ಆಸ್ಪತ್ರೆಯ ಆವರಣದಲ್ಲಿ ರೋಗಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಾಲೂಕಿನ ಚಳಗೇರಾ ಗ್ರಾಮದ ಅಂಬಾಜಿ ಮಾರುತಿ ಮರಾಠ(35) ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲೆಯಾಗಿದ್ದ ಅಂಬಾಜಿ ವಸತಿ ಗೃಹ ಕಟ್ಟಡದ ಮೇಲಿಂದ ಜಿಗಿಯಲು ಯತ್ನಿಸಿದ್ದಾನೆ.
ವಿಷಯ ತಿಳಿದ ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಒಂದು ಗಂಟೆಯ ವರೆಗೆ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರೋಗಿಯನ್ನು ರಕ್ಷಿಸಿ ಕೆಳಗೆ ಇಳಿಸಿ ತಂದಿದ್ದಾರೆ.
ಕೌಟುಂಬಿಕ ಸಮಸ್ಯೆಯಿಂದ ಮಾನಸಿಕವಾಗಿ ಹಾಗೂ ಅನಾರೋಗ್ಯ ಪೀಡಿತನಾಗಿದ್ದ ಅಂಬಾಜಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel