ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್, ಪವಿತ್ರಾಗೌಡ ಸೇರಿದಂತೆ ಹಲವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ದರ್ಶನ್ ಜಾಮೀನು ಅರ್ಜಿಯನ್ನು ಕೋರ್ಟ್ ಸೋಮವಾರ ಮುಂದೂಡಿದೆ. ಇದರ ಬೆನ್ನಲ್ಲೇ ಪವಿತ್ರಾಗೌಡ ಅರ್ಜಿ ಕೂಡ ಮುಂದೂಡಿಕೆಯಾಗಿದೆ.
ಇಂದು ಕೋರ್ಟ್ ಲ್ಲಿ ಪವಿತ್ರಾ ಗೌಡ ಪರ ವಕೀಲರು ವಾದ ಮಂಡಿಸಿದರು. ಪ್ರಕರಣದಲ್ಲಿ ಪವಿತ್ರಾಗೌಡ ಪಾತ್ರ ಏನೂ ಇಲ್ಲ ಎಂದು ವಾದಿಸಿದರು. ಸೋಮವಾರ ಪ್ರತಿವಾದ ಮಾಡುವುದಾಗಿ ಸರಕಾರಿ ವಕೀಲರು ಮನವಿ ಮಾಡಿಕೊಂಡರು. ಹೀಗಾಗಿ ಸೆಪ್ಟಂಬರ್ 30ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.
ಇಂದು ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಪವಿತ್ರಾಗೌಡ ಇದ್ದರು. ಆದರೆ, ದರ್ಶನ್ ಮತ್ತು ಪವಿತ್ರಾಗೌಡಗೆ ನಿರಾಸೆಯಾಗಿದೆ. ಜಾಮೀನು ಅರ್ಜಿಗೆ ಇಂದು ಎಸ್.ಪಿ.ಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಿದ್ದರು. ಆಕ್ಷೇಪಣೆ ವಾದವನ್ನು ಸೋಮವಾರ ಮಂಡಿಸುವುದಾಗಿ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ಹೀಗಿ ಸೆ. 30ಕ್ಕೆ ವಿಚಾರಣೆ ಮುಂದೂಡಲಾಯಿತು.