ಕನ್ನಡ ಕಿಚ್ಚ, ನಟ ಸುದೀಪ್ ತಾಯಿ ಇಂದು ಇಹಲೋಕ ತ್ಯಜಿಸಿದ್ದಾರೆ. ಸದ್ಯ ಅವರ ತಾಯಿಯ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಅವರು ಕೂಡ ಸುದೀಪ್ (Sudeep) ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕನ್ನಡದಲ್ಲೇ ಪತ್ರ ಬರೆದು ಸಂತಾಪ ಸೂಚಿಸಿದ್ದಾರೆ. ಅಲ್ಲದೇ, ಸುದೀಪ್ ತಾಯಿಯ ನಿಧನದ ಸುದ್ದಿ ಕೇಳಿ ದುಃಖವಾಗಿದೆ ಎಂದು ಕಂಬನಿ ಮಿಡಿದಿದ್ದಾರೆ. ಖ್ಯಾತ ನಟ ಕಿಚ್ಚ ಸುದೀಪ್ ತಾಯಿ ಸರೋಜ ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಹಾಗೂ ಪ್ರೋತ್ಸಾಹವಿದೆ ಎಂದು ಸುದೀಪ್ ಹೇಳಿದ್ದರು.ತಾಯಿಯ ನಷ್ಟದಿಂದ ಬೇಗ ಚೇತರಿಸಿಕೊಳ್ಳಬೇಕು. ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು ಎಂದು ಪವನ್ ಕಲ್ಯಾಣ್ ಎಕ್ಸ್ ನಲ್ಲಿ ಬರೆದು ಕಂಬನಿ ಮಿಡಿದಿದ್ದಾರೆ.
ಸುದೀಪ್ ಅವರ ತಾಯಿ ಇಂದು ಬೆಳಗಿನ ಜಾವ ವಿಧಿ ವಶರಾಗಿದ್ದಾರೆ. ನ್ಯೂಮೋನಿಯಾದಿಂದಾಗಿ ಅವರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.