ಕೊರೊನಾ ವೈರಸ್ ದೇಶಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಸಹಾಯಕ್ಕೆ ಮುಂದಾಗಿದ್ದಾರೆ. ಅವರು ಕೊರೊನಾ ವಿರುದ್ಧದ ಹೋರಾಟಕ್ಕೆ ಎರಡು ಕೋಟಿ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ತಲಾ 50 ಲಕ್ಷ ರೂ.ನಂತೆ 1 ಕೋಟಿ ರೂ. ದೇಣಿಗೆ ನೀಡುತ್ತೇನೆ. ಅಷ್ಟೇ ಅಲ್ಲದೆ ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಗೆ ಒಂದು ಕೋಟಿ ನೀಡಲು ನಿರ್ಧರಿಸಿರುವೆ ಎಂದು ತಿಳಿಸಿದ್ದಾರೆ
ಇಷ್ಟೆ ಅಲ್ಲದೆ ಕೇಂದ್ರ ಸರ್ಕಾರದ ಸಂದೇಶ ಮತ್ತು ಸಲಹೆಯನ್ನು ಪವನ್ ಕಲ್ಯಾಣ್ ಸ್ವಾಗತಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತೇನೆ. ಜನಸೇನಾ ಪಕ್ಷದ ಮುಖ್ಯಸ್ಥರು ಹಾಗೂ ದೇಶದ ಪ್ರತಿಯೊಬ್ಬ ಪ್ರಜೆ ಪ್ರಧಾನಿ ಮೋದಿ ಅವರ ಸಲಹೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ. ಜೊತೆಗೆ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಇತರರ ಸೇವೆಗಳನ್ನು ಪವನ್ ಕಲ್ಯಾಣ್ ಶ್ಲಾಘಿಸಿದ್ದಾರೆ.








