ಬೆಂಗಳೂರು: ಕೊರೊನಾ ವೈರಸ್ ಸೋಂಕು ತಡೆಗಾಗಿ ಮಾಡಿದ್ದ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ ಸಂಬಳ ಬಿಡುಗಡೆ ಮಾಡಬೇಕು ಎಂದು ಮಾಜಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ. ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಿ ಈ ಮೂಲಕ ಅವರಿಗೆ ಸರ್ಕಾರ ವೇತನ ನೀಡಬೇಕು ಎಂದು ಟ್ವಿಟರ್ನಲ್ಲಿ ಆಗ್ರಹಿಸಿದ್ದಾರೆ.
ವೇತನವಿಲ್ಲದೆ ಅತಂತ್ರರಾಗಿರುವ ಅತಿಥಿ ಉಪನ್ಯಾಸಕರ ಪೈಕಿ 8 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರಿಗೆ ಸ್ಪಂದಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.