ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೀದಿಬದಿ ವ್ಯಾಪಾರಿಗಳು, ಆಟೋರಿಕ್ಷಾ, ಕ್ಯಾಬ್ ಚಾಲಕರಿಗೆ ಆದಷ್ಟು ಬೇಗ ಮಾಸಿಕ ಹತ್ತು ಸಾವಿರ ಪರಿಹಾರ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್.. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೇ, ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳು, ಆಟೋರಿಕ್ಷಾ, ಕ್ಯಾಬ್ ಚಾಲಕರ ನೋಂದಣಿ ಗೊಂದಲ ತಕ್ಷಣ ಬಗೆಹರಿಸಿ. ಅವರು ಬದುಕಿದ್ದಾಗಲೇ ಮಾಸಿಕ 10,000 ರುಪಾಯಿ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.
ಇದರೊಂದಿಗೆ ಲಾಕ್ ಡೌನ್ ಕಾರಣದಿಂದ ಮುಚ್ಚಿರುವ ಜಿಮ್, ಫಿಟ್ನೆಸ್ ಕೇಂದ್ರಗಳನ್ನು ತೆರೆಯಲು ಅವಕಾಶ ಮಾಡಿಕೊಡಿ ಎಂದು ಡಿ.ಕೆ ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.








