ಶಾಂತಿಯುತ ಪ್ರತಿಭಟನೆ ಬಲಿಷ್ಠ ಪ್ರಜಾಪ್ರಭುತ್ವದ ಲಕ್ಷಣ : ಅಮೆರಿಕ
ಅಮೆರಿಕಾ: ರಾಷ್ಟ್ರ ರಾಜದಾನಿ ದೆಹಲಿಯಲ್ಲಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಕೇಂದ್ರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ಸುಮಾರು 70 ದಿನಗಳಿಂದ ರೈತರು ಪ್ರತಿಭಟನೆ ನಡೆಸ್ತಾಯಿದ್ದಾರೆ. ಸದ್ಯ ಇದು ದೇಶದ ಅಷ್ಟೇ ಅಲ್ದೇ ಇಡೀ ವಿಶ್ವದ ಗಮನ ಸೆಳೆದಿದೆ. ಇತ್ತೀಚೆಗಷ್ಟೇ ಈ ಬಗ್ಗೆ ಖ್ಯಾತ ಪಾಪ್ ಗಾಯಕಿ ರಿಹಾನಾ ಟ್ವೀಟ್ ಮಾಡಿದ್ದರು. ರೈತರ ಪ್ರತಿಭಟನೆಗೆ ಬೆಂಬಲಿಸುವ ಜೊತೆಗೆ ಸರ್ಕಾರದ 3 ಕೃಷಿ ಕಾಯ್ದೆಗಳಿಗೂ ಹಲವರಿಂದ ಬೆಂಬಲ ವ್ಯಕ್ತವಾಗ್ತಿದೆ. ಅದ್ರಲ್ಲೂ ಜಾಗತಿಕ ಮಟ್ಟದಲ್ಲಿ ಈ ವಿಚಾರ ಚರ್ಚೆಯಾಗ್ತಿರುವ ಹೊತ್ತಲ್ಲಿ ವಿಶ್ವದ ದೊಡ್ಡಣ್ಣ ಅಮೆರಿಕಾದ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದೆ.
ಅಕ್ರಮ ಸಂಬಂಧ : ಮಹಿಳೆ , ತಾಯಿಯ ಕೊಲೆ : ಅಪ್ರಾಪ್ತೆಯ ಮೇಲೆ ಅತ್ಯಾಚಾರ..!
ಹೌದು ಭಾರತದಲ್ಲಿ ರೈತರ ಪ್ರತಿಭಟನೆ ಬಗ್ಗೆ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕದ ಗೃಹ ಇಲಾಖೆ, ಶಾಂತಿಯುತ ಪ್ರತಿಭಟನೆಗಳು ಬಲಿಷ್ಠ ಪ್ರಜಾಪ್ರಭುತ್ವದ ಲಕ್ಷಣವಾಗಿದೆ. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ. ಇದೇ ವೇಳೆ ಅಮೆರಿಕದ ಜೋ ಬೈಡನ್ ಆಡಳಿತ, ರೈತರಿಗೆ ಹೆಚ್ಚಿನ ಮಾರುಕಟ್ಟೆ ಆಯ್ಕೆಗಳನ್ನು ನೀಡುವ, ಖಾಸಗಿ ಹೂಡಿಕೆಗೆ ಅವಕಾಶ ಮಾಡಿಕೊಡುವ, ಕೃಷಿ ಕ್ಷೇತ್ರದ ಸುಧಾರಣೆಗಳಿಗೆ ಭಾರತ ಸರ್ಕಾರದ ಕ್ರಮಗಳನ್ನು ಬೆಂಬಲಿಸುತ್ತದೆ ಎಂದು
ಹೇಳಿದೆ. ಈ ಮೂಲಕ ಭಾರತದ ಕೃಷಿ ಕಾಯ್ದೆಗಳನ್ನ ಅಮೆರಿಕಾವು ಬೆಂಬಲಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








