ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ (Pendrive Case) ಹಂಚಿಕೆ ಮಾಡಿದ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಜಾಮೀನು ಸಿಕ್ಕಿದೆ.
ಹಾಸನ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು (Bail) ಮಂಜೂರು ಮಾಡಿದೆ. ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡನನ್ನು ಮೇ 12 ರಂದು ಎಸ್‌ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿತ್ತು.
ಈಗ 18 ದಿನಗಳ ನಂತರ ಆರೋಪಿಗಳು ಜಾಮೀನು ಪಡೆದಿದ್ದಾರೆ. ಆರೋಪಿಗಳು ನಾಳೆ ವೇಳೆಗೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಆರೋಪಿಗಳ ಪರ ವಕೀಲ ಹರೀಶ್ ಬಾಬು ವಾದ ಮಂಡಿಸಿದ್ದರು.