ಬೆಂಗಳೂರು: ಮಳೆ ನೀರನ್ನು ಡೈರೆಕ್ಟ್ ಆಗಿ ಚರಂಡಿಗೆ ಬಿಟ್ಟರೆ ದಂಡ ಬೀಳುತ್ತದೆ ಎಂದು ಬೆಂಗಳೂರು ಜಲ ಮಂಡಳಿ ಸೂಚಿಸಿದೆ.
ಮಳೆ ನೀರು ಕೋಯ್ಲು ಪದ್ದತಿಯ ಅಳವಡಿಕೆಯ ಮೂಲಕ ನೀರನ್ನು ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಹಲವಾರು ಕಡೆಗಳಲ್ಲಿ ಈ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವ ಮೂಲಕ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗುವ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ಮಳೆ ನೀರು ಇಂಗಿಸುವ ಕಾರ್ಯ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಹರಿಯಬಿಡುತ್ತಿರುವ ಜನರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಬೆಂಗಳೂರು ಜಲಮಂಡಳಿ ಸೂಚನೆ ನೀಡಿದೆ.
ಈ ಕುರಿತು ಸಭೆ ನಡೆಸಿ ಸೂಚನೆ ನೀಡಿದ ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್ ಪ್ರಸಾತ್ ಮನೋಹರ್, ಮಳೆಯನ್ನ ಸಮರ್ಪಕವಾಗಿ ಬಳಕೆ ಮಾಡುವುದರಿಂದ ನಗರದ ಅಂತರ್ಜಲ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸಬಹುದಾಗಿದೆ. ಕೆಲವಡೆ ಮಳೆ ನೀರು ಕೊಯ್ಲು ಪದ್ದತಿಯ ಮೂಲಕ ಸಂಗ್ರಹಿಸಲಾದ ನೀರನ್ನು ಒಳಚರಂಡಿಗೆ ಬಿಡಲಾಗುತ್ತದೆ. ಹೀಗೆ ಮಾಡಿದಲ್ಲಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.