ರಾಮನಗರ: ದೇವೇಗೌಡರ ಕುಟುಂಬಸ್ಥರು ಸ್ವಾರ್ಥಿಗಳು ಎನ್ನುವುದು ಮತದಾರರಿಗೂ ಗೊತ್ತು. ಹೀಗಾಗಿ ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ ಎಂದು ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಯೋಗೇಶ್ವರ್ ಅವರು ನಿಖಿಲ್ ವಿರುದ್ಧ ಬರೋಬ್ಬರಿ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಗೆಲುವಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಗೆಲುವಿನ ಕ್ರೆಡಿಟ್ ನ್ನು ಕಾಂಗ್ರೆಸ್‌ಗೆ, ಸಿಎಂ ಸಿದ್ದರಾಮಯ್ಯ(CP Yogeshwar), ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹಾಗೂ ನನ್ನ ಆಪ್ತ ಸುರೇಶ್‌ಗೆ ಅರ್ಪಿಸುತ್ತೇನೆ ಎಂದಿದ್ದಾರೆ.
ನಾನು ಡಿಸಿಎಂ ಅವರಿಗೆ 30 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಹೇಳಿದ್ದೆ. ಈಗಾಗಲೇ ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ. ದೇವೇಗೌಡರ ಹೋರಾಟದಲ್ಲಿ ಸಾಮಾಜಿಕ ಕಳಕಳಿ ಇರಲಿಲ್ಲ. ಕೇವಲ ಸ್ವಾರ್ಥ ಇತ್ತು. ಕುಟುಂಬದವರನ್ನ ಬೆಳೆಸುವ ಹೋರಾಟ ಇತ್ತು. ಒಕ್ಕಲಿಗರ ನಾಯಕತ್ವವನ್ನು ಹತ್ತಿಕ್ಕುವ ಸಂಚಿತ್ತು. ಆದರೆ, ಜನರಿಗೆ ಇದೆಲ್ಲ ಅರ್ಥವಾಗಿದೆ. ಹೀಗಾಗಿ ನನಗೆ ಮತ ನೀಡಿದ್ದಾರೆ ಎದಿದ್ದಾರೆ.
ನಿಖಿಲ್ ಇನ್ನೂ ಯುವಕ. ಆತನಿಗೆ ಒಳ್ಳೆಯದಾಗಲಿ. 36 ವರ್ಷದ ಯುವಕ 63 ವರ್ಷದವರ ಥರ ಮಾತನಾಡುತ್ತೇನೆ. ದೇವೇಗೌಡರು ತಮ್ಮ ಸಂಧ್ಯಕಾಲದಲ್ಲಿ ಮೊಮ್ಮಗನ ಪರ ಪ್ರಚಾರ ಮಾಡಿದರು. ಆದರೆ, ಏನೂ ಮಾಡಲು ಆಗಲಿಲ್ಲ. 100ಕ್ಕೆ 100 ಭಾಗ ಒಕ್ಕಲಿಗರ ಒಲವನ್ನ ದೇವೇಗೌಡರ ಕುಟುಂಬ ಕಳೆದಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಜಯೇಂದ್ರ ಅವರು ನನ್ನ ಬ್ಯಾಟರಿ ವೀಕ್ ಆಗಿದೆ ಎಂದು ಹೇಳಿದ್ದರು. ಆದರೆ ಅವರ ಬ್ಯಾಟರಿ ವೀಕ್ ಆದಾಗ ನಾನು ಚಾರ್ಜ್ ಮಾಡಿದ್ದೆ. ವಿಜಯೇಂದ್ರ, ಯಡಿಯೂರಪ್ಪ ಷಡ್ಯಂತ್ರದಿಂದ ನಾನು ಎನ್‌ಡಿಎ ಬಿಟ್ಟೆ ಎಂದಿದ್ದಾರೆ.






