ಕೊಪ್ಪಳ:ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫಿವರ್ ಗೆ (Viral Fever) ಜನರು ರೋಸಿ ಹೋಗಿದ್ದು, ಆತಂಕ ಮನೆ ಮಾಡಿದೆ.
ಗ್ರಾಮದಲ್ಲಿ ವೈರಲ್ ಪಿವರ ಹೆಚ್ಚಾಗಿ ಹರಡಿದ್ದು, ಜನರು ಜ್ವರ ಹಾಗೂ ಮೈಕೈ ನೋವಿನಿಂದ ಬಳಲುತ್ತಿದ್ದಾರೆ. ಸ್ಥಳಕ್ಕೆ ಕುಷ್ಟಗಿ ತಹಶೀಲ್ದಾರ್ ರವಿಕುಮಾರ್ ಹಾಗೂ ಆರೋಗ್ಯ ಸಿಬ್ಬಂದಿ ಭೇಟಿ ನೀಡಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ದೇವಸ್ಥಾನದಲ್ಲಿಯೇ ಚಿಕಿತ್ಸೆ ನೀಡುತ್ತಿದ್ದಾರೆ. ಹೀಗಾಗಿ ರೋಗಿಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸುತ್ತೇವೆ ಎಂದು ತಹಶೀಲ್ದಾರ್ ಹೇಳಿದ್ದಾರೆ.
ಜ್ವರ ಮತ್ತು ಮೈಕೈ ನೋವು ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಕಳೆದ ಮೂರು ದಿನಗಳಿಂದ ಗ್ರಾಮದ ದೇವಸ್ಥಾನದಲ್ಲಿಯೇ ರೋಗಿಗಿಗೆ ಚಿಕಿತ್ಸೆ ನೀಡುತ್ತಿತ್ತು.