madikeri ಮಂಜಿನ ನಗರಿಯಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್
ಮಡಿಕೇರಿ : ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಮುಂದುವರೆದಿದೆ.
ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಮಡಿಕೇರಿಯಲ್ಲಿ ಜನರು ಸ್ವಯಂ ಪ್ರೇರಿತರಾಗಿ ಲಾಕ್ ಡೌನ್ ಮಾರೆ ಹೋಗಿದ್ದಾರೆ.
ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜನರು ಭಯಭೀತಗೊಂಡಿದ್ದು, ಅನವಶ್ಯಕ ಓಡಾಟಕ್ಕೆ ಬ್ರೇಕ್ ಹಾಕುತ್ತಿದ್ದಾರೆ.
ಪರಿಣಾಮ ನಗರದ ಪ್ರಮುಖ ರಸ್ತೆಗಳಾದ ಜನರಲ್ ತಿಮ್ಮಯ್ಯ ವೃತ್ತ, ಇಂದಿರಾಗಾಂಧಿ ಸರ್ಕಲ್ ಸೇರಿದಂತೆ ಬಹುತೇಕ ಜನದಟ್ಟಣೆಯ ಪ್ರದೇಶಗಳಲ್ಲಿ ಜನಸಂಖ್ಯೆ ವಿರಳವಾಗುತ್ತಿದೆ.
ರಸ್ತೆಗಳಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಮಾತ್ರ ಸಂಚರಿಸುತ್ತಿದ್ದು, ಅನಿವಾರ್ಯ ಕೆಲಸಗಳಿದ್ದವರು, ಕೆಲಸ ಕಾರ್ಯಗಳಿಗೆ ಹೋಗುವ ಜನರು ಮಾತ್ರ ಓಡಾಡುತ್ತಿದ್ದಾರೆ.
ಇಲ್ಲದೆ ಪ್ರವಾಸಿಗರ ಹಾಟ್ ಸ್ಪಾಟ್ ಆಗಿದ್ದ ಮಡಿಕೇರಿಯ ರಾಜಾಸೀಟ್, ಅಬ್ಬಿಫಾಲ್ಸ್ ಮತ್ತು ದುಬಾರೆ ನಿಸರ್ಗಧಾಮ ಮಂದಲ್ ಪಟ್ಟಿ ಸೇರಿದಂತೆ ಪ್ರಮುಖವಾದ ಪ್ರವಾಸಿ ತಾಣಗಳಲ್ಲೂ ಪ್ರವಾಸಿಗರೇ ಇಲ್ಲದೆ ಎಲ್ಲಾ ಬಿಕೋ ಎನ್ನುತ್ತಿವೆ.









