ರಾಯಚೂರು: ಮಾಂಸಾಹಾರ ಸೇವಿಸಿ ಹಲವರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಈ ಘಟನೆ ಲಿಂಗಸುಗೂರು ತಾಲೂಕಿನ ಪರಂಪೂರ ತಾಂಡಾದಲ್ಲಿ ನಡೆದಿದೆ.
ದೇವರ ಕಾರ್ಯಕ್ಕೆಂದು ಮಾಡಿದ್ದ ಮಾಂಸಾಹಾರ ಸೇವಿಸಿದ್ದ ನಂತರ ಹಲವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಪರಿಣಾಮ 20ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ಬುಧವಾರ ಮಧ್ಯಾಹ್ನದ ಊಟದ ನಂತರ ಸಂಜೆ ವೇಳೆಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಮಕ್ಕಳು, ಹಿರಿಯರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಸುಮಾರು 10ಜನ ಹೆಚ್ಚು ಅಸ್ವಸ್ಥರಾಗಿದ್ದಾರೆ.
ತೀವ್ರ ಅಸ್ವಸ್ಥಗೊಂಡ 10 ಜನರನ್ನು ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದವರು ಗ್ರಾಮದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಅಮರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.