ಬೆಂಗಳೂರು: ಭಕ್ತವತ್ಸಲ ಸಮಿತಿಯ 5 ಶಿಫಾರಸ್ಸುಗಳಲ್ಲಿ ಮೂರಕ್ಕೆ ಸಚಿವ ಸಂಪುಟ ಅಸ್ತು ಎಂದಿದೆ.
ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗುವ ವಿಚಾರದ ಹಿನ್ನೆಲೆಯಲ್ಲಿ ಸುಪ್ರಿಂಕೋರ್ಟ್ ತೀರ್ಪು ಮುಂದಿಟ್ಟುಕೊಂಡು ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಹೀಗಾಗಿ ಸಂಪುಟ ಒಪ್ಪಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ (HK Patil) ಹೇಳಿದ್ದಾರೆ.
ಮೀಸಲಾತಿ ಪ್ರಮಾಣ ಶೇ.50ರಷ್ಟು ಮೀರದಂತೆ ನೋಡಿಕೊಂಡು ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ. ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಸ್ಥಾನ ಒಬಿಸಿಗೆ ಮೀಸಲಿರಿಸುವ ಜೊತೆಗೆ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ಶಾಖೆಗಳನ್ನು ಆಡಳಿತ ಸುಧಾರಣಾ ಇಲಾಖೆಯ ಹತೋಟಿಗೆ ನೀಡಲು ಸಮಿತಿ ನೀಡಿದ ಶಿಫಾರಸ್ಸಿಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.