11 ಸಾವಿರ ಪೌರ ಕಾರ್ಮಿಕರಿಗೆ ಖಾಯಂಉದ್ಯೋಗ ಭೈರತಿ ಬಸವರಾಜು….
ರಾಜ್ಯದಲ್ಲಿ 11ಸಾವಿರಕ್ಕೂ ಅಧಿಕ ಪೌರಕಾರ್ಮಿಕರನ್ನು ನೇರ ನೇಮಕಾತಿ ಮೂಲಕ ಖಾಯಂ ಉದ್ಯೋಗ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜು ವಿಧಾನ ಪರಿಷತ್ ನಲ್ಲಿಂದು ತಿಳಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿ ಸಚಿವರು, ಮಹಾನಗರ ಪಾಲಿಕೆಗಳಲ್ಲಿ 1 ಸಾವಿರಕ್ಕೂ ಅಧಿಕ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 3 ಸಾವಿರಕ್ಕೂ ಅಧಿಕ ಪೌರಕಾರ್ಮಿಕರು ಸೇರಿದಂತೆ 11ಸಾವಿರಕ್ಕೂ ಅಧಿಕ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಮತ್ತೋರ್ವ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವ ಆಚಾರ್ ಹಾಲಪ್ಪ , ಮಾನವಕಳ್ಳ ಸಾಗಣೆ ಕುರಿತ ಜಾಗೃತಿಗೆ ಸರ್ಕಾರ ಮುಂದಾಗಿದೆ . ಪ್ರತಿ ಜಿಲ್ಲೆಯಲ್ಲಿ ಮಾನವ ಕಳ್ಳಸಾಗಣಿಕೆ ಕುರಿತು ಅರಿವು ಮೂಡಿಸಲು ಹಣ ಮೀಸಲಿಡಲಾಗಿದೆ. ಕಾಲೇಜು ವಿಶ್ವವಿದ್ಯಾಲಯಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.