ಗಣೇಶೋತ್ಸವಕ್ಕೆ ಅನುಮತಿ : ಇಂದೇ ಹೊರಬೀಳಲಿದೆ ಮಹತ್ವ ನಿರ್ಧಾರ ganeshotsav saaksha tv
ಬೆಂಗಳೂರು : ರಾಜ್ಯದಾದ್ಯಂತ ಗಣೇಶೋತ್ಸವಕ್ಕೆ ಅನುಮತಿ ನೀಡಲು ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆಗಳಿವೆ.
ಈ ಸಂಬಂಧ ರಾಜ್ಯ ಸರ್ಕಾರ ಇಂದು ಮಹತ್ವದ ನಿರ್ಧಾರವನ್ನು ಪ್ರಕಟಿಸಲಿದೆ ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ, ರಾಜ್ಯ ಸರ್ಕಾರ ಕೆಲ ಷರತ್ತುಗಳೊಂದಿಗೆ ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡಲು ಅನುಮತಿ ನೀಡುವ ಸಾಧ್ಯತೆ ಇದೆ.
ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಗಳು ಮತ್ತು ಸ್ವಪಕ್ಷೀಯರ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಗಣೇಶೋತ್ಸವಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಷರತ್ತುಬದ್ಧ ಅನುಮತಿ ನೀಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಅಂದ್ಹಾಗೆ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ವೇಳೆ ಗಣೇಶೋತ್ಸವ ಆಚರಣೆಗೆ ಅನುಮತಿ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.