ಬೆಂಗಳೂರು, ಮೇ 14 : ರಂಜಾನ್ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯಕ್ಕೆ ನಮಾಜ್ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ರಂಜಾನ್ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯಕ್ಕೆ ನಮಾಜ್ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಎಲ್ಲಾ ಮುಸ್ಲಿಂ ಸಮುದಾಯದ ಪರವಾಗಿ ನಿಮ್ಮಲ್ಲಿ ನಾನು ಮನವಿ ಮಾಡಿಕೊಳ್ಳುತ್ತಿದ್ದು, ಮೇ 24 ಹಾಗೂ 25 ರಂದು ರಂಜಾನ್ ಆಚರಣೆ ಇರುವ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯಕ್ಕೆ ವಿಶೇಷ ಪ್ರಾರ್ಥನೆ ಮಾಡಲು ಅನುಮತಿ ನೀಡಬೇಕು. ರಂಜಾನ್ ಆಚರಣೆಯಂದು ಮುಂಜಾಗ್ರತಾ ಕ್ರಮ ತೆಗೆದುಕೊಂಡು ಪ್ರಾರ್ಥನೆ ಮಾಡಲು ಬೆಳಗ್ಗಿನಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಅವಕಾಶ ಕಲ್ಪಿಸಬೇಕೆಂದು ಪತ್ರದಲ್ಲಿ ಬರೆದಿದ್ದಾರೆ.
ಮುಖ್ಯಮಂತ್ರಿಗಳು ವೈದ್ಯಕೀಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ರಾಜ್ಯಾದ್ಯಂತ ಎಲ್ಲಾ ಮುಸ್ಲಿಂ ಬಾಂಧವರಿಗೆ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಪತ್ರದ ಮೂಲಕ ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ.
ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...








