ಮಹಿಳಾ SI ಮೇಲೆ ಹಲ್ಲೆ ಮಾಡಿದ ವ್ಯಕ್ತಿ
ತಮಿಳುನಾಡು: ವ್ಯಕ್ತಿಯೋರ್ವ ಸಬ್ ಇನ್ಸ್‌ಪೆಕ್ಟರ್ ಕುತ್ತಿಗೆಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಜವೂರಿನಲ್ಲಿ ನಡೆದಿದೆ.
ಮಾರ್ಗರೇಟ್ ಥೆರೇಸಾ ಹಲ್ಲೆಗೊಳಗಾದ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್. ಪಜಗೂರು ಗ್ರಾಮದಲ್ಲಿ ಧಾರ್ಮಿಕ ಉತ್ಸವ ನಡೆಯುತ್ತಿದ್ದ ವೇಳೆ ಮಹಿಳಾ ಭದ್ರತಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಈ ವೇಳೆ ಆರೋಪಿ ಆರುಮುಗಂ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ಅವರು ನೆಲಕ್ಕೆ ಬಿದ್ದಿದ್ದರು. ಕೂಡಲೇ ಅವರನ್ನು ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದ್ದಾರೆ. ಹಳೇ ದ್ವೇಷದ ಕಾರಣ ಈ ಕೃತ್ಯವೆಸಗಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ.
ಹಳೆ ದ್ವೇಷ : ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ವೇಳೆ ಆತನ ಬಂಧನ ಮಾಡಲಾಗಿತ್ತು. ಈ ವೇಳೆ ಎಸ್ಐ ಮಾರ್ಗರೇಟ್ ಈತನ ಮೇಲೆ ಪ್ರಕರಣ ದಾಖಲು ಮಾಡಿದ್ದರು. ಇದೇ ಕೋಪದಲ್ಲಿ ಇದೀಗ ಕೃತ್ಯವೆಸಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡಿರುವ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಮಾರ್ಗರೇಟ್ ಅವರಿಗೆ ಉನ್ನತ ಮಟ್ಟದ ಚಿಕಿತ್ಸೆ ನೀಡುವಂತೆ ಆದೇಶ ನೀಡಿದ್ದಾರೆ.