ನವದೆಹಲಿ : ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಕೊಲೆ ಪ್ರಕರಣದ ದೋಷಿಗಳಿಗೆ ಮಾರ್ಚ್ 3ಕ್ಕೆ ಗಲ್ಲುಶಿಕ್ಷೆ ಖಾಯಂ ಆಗಿದೆ. ಈ ನಡುವೆ, ಮಾನಸಿಕ ಅಸ್ವಸ್ಥನೆಂದು ಚಿಕಿತ್ಸೆ ನೀಡುವಂತೆ ದೋಷಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಪಟಿಯಾಲ ಕೋರ್ಟ್ ಹೌಸ್ ವಜಾಗೊಳಿಸಿದೆ. ಫೆ.16ರಂದು ವಿನಯ್ ಶರ್ಮಾ ಜೈಲಿನ ಗೋಡೆಗೆ ತನ್ನ ತಲೆಯನ್ನು ಜಜ್ಜಿಕೊಂಡಿದ್ದ. ಇದರ ಬೆನ್ನಲ್ಲೇ ವಿನಯ್ ಶರ್ಮ ಮಾನಸಿಕ ಅಸ್ವಸ್ಥ, ಆತನಿಗೆ ಚಿಕಿತ್ಸೆ ಅಗತ್ಯವಿದೆ ಎಂದು ಆತನ ಪರ ವಕೀಲರು ಪಟಿಯಾಲ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ತಿಹಾರ್ ಜೈಲು ಅಧಿಕಾರಿಗಳು ವಿನಯ್ ಶರ್ಮ ಮಾನಸಿಕ ಅಸ್ವಸ್ಥನಲ್ಲ ಎಂದು ವರದಿಯನ್ನು ಕೋರ್ಟ್ ಗೆ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್ ವಿನಯ್ ಶರ್ಮ ಅರ್ಜಿಯನ್ನು ವಜಾಗೊಳಿಸಿದೆ.
ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ
ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ ಅಂಗವಾಗಿ...








