ನಟ ದರ್ಶನ್ ಮತ್ತು ಇತರ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ, ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಜಾಮೀನು ರದ್ದು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಮತ್ತು ಜಗದೀಶ್ ಅವರ ಹೆಸರುಗಳು ಸೇರಿವೆ.
ಈ ಪ್ರಕರಣದಲ್ಲಿ ಡಿಸೆಂಬರ್ 13 ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.








