ದೇಶದಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಮುಂಬೈ : ಭಾರತದಲ್ಲಿ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗಿದೆ. ಪರಿಣಾಮ ದೇಶದ ಮೆಟ್ರೊ ನಗರಗಳಲ್ಲಿ ಇಂಧನ ದರ ದಾಖಲೆ ಮಟ್ಟ ತಲುಪಿದೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಮತ್ತು
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‍ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತಾರಾಷ್ಟ್ರೀಯ ಮಾನದಂಡ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪರಿಷ್ಕರಿಸುತ್ತವೆ. ಅದರಂತೆ ತೈಲ ಬೆಲೆ ಏರಿಕೆಯಾಗುತ್ತದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 25 ಪೈಸೆಯಷ್ಟು ಹೆಚ್ಚಾಗಿದ್ದು 95.56 ರೂ. ಆಗಿದೆ. ಡೀಸೆಲ್ ಬೆಲೆ 86.47 ಲೀಟರ್ ಆಗಿ 25 ಪೈಸೆ ಏರಿಕೆಯಾಗಿದೆ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 96.94 ರೂ, ಡೀಸೆಲ್ ಬೆಲೆ 91.15 ರೂಪಾಯಿ ಆಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‍ಗೆ 95.52 ರೂ, ಡೀಸೆಲ್ ಬೆಲೆ ಪ್ರತಿ ಲೀಟರ್‍ಗೆ 89.32 ರೂಪಾಯಿ ಆಗಿದೆ.
ಬೆಂಗಳೂರಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‍ಗೆ 98.75 ರೂ. ಡೀಸೆಲ್ ಬೆಲೆ – ಪ್ರತಿ ಲೀಟರ್‍ಗೆ 91.67 ರೂ ಆಗಿದೆ.








