Coimbatore | ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಚೆನ್ನೈ : ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
ಘಟನೆಯಲ್ಲಿ ಯಾವುದೇ ಹಾಲಿ ಅಥವಾ ಯಾರಿಗೂ ತೊಂದರೆಯೂ ಆಗಿಲ್ಲ.
ಪೆಟ್ರೋಲ್ ಬಾಂಬ್ ದಾಳಿ ನಡೆಸುವುದಕ್ಕೂ ಮೊದಲು ಕಚೇರಿ ಬಳಿ ಕೆಲವರು ಅನುಮಾನಸ್ಪದವಾಗಿ ಚಲಿಸಿರುವುದು ಕಂಡುಬಂದಿದೆ.
ಇತ್ತ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ “ ಈ ರೀತಿಯ ಘಟನೆಯು ಬಿಜೆಪಿ ಕಾರ್ಯಕರ್ತರನ್ನು ತಡೆಯುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಅಣ್ಣಾಮಲೈ ತಮ್ಮ ಟ್ವೀಟ್ ನಲ್ಲಿ, ನಮ್ಮ ಪಕ್ಷದ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
ಆದರೇ ಈ ಘಟನೆಯಿಂದ ನಮ್ಮ ಸಹೋದರ – ಸಹೋದರಿಯರನ್ನು ತಡೆಯಲು ಸಾಧ್ಯವಿಲ್ಲ.
ಇದು ನಮ್ಮ ಸಮಾಜ ಮತ್ತು ದೇಶಕ್ಕೆ ದ್ರೋಹ ಬಗೆಯುವ ಶಕ್ತಿಗಳ ವಿರುದ್ಧ ಹೋರಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಬರೆದುಕೊಂಡಿದ್ದಾರೆ.